ತೆಲಂಗಾಣ ಸೇರಿದಂತೆ ಇಂದು 6 ರಾಜ್ಯಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಎಲ್ಲರ ಕಣ್ಣು ತೆಲಂಗಾಣ ಹಾಗೂ ಬಿಹಾರದ ಮೇಲಿದೆ.
ತೆಲಂಗಾಣ ಮತ್ತು ಬಿಹಾರದಲ್ಲಿ ತಲಾ 2 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪಾರ್ಟಿ ಸದಸ್ಯರನ್ನು ಬಿಜೆಪಿ ಆಪರೇಷನ್ ಕಮಲ ಮಾಡಲು ಹೋಗಿ ಸಿಕ್ಕಿಬಿದ್ದಿದ್ದರಿಂದ ಇಲ್ಲಿನ ಚುನಾವಣೆ ಪ್ರಮುಖ ಆಕರ್ಷಣೆಯಾಗಿದೆ.
ತೆಲಂಗಾಣದ ಮನುಗೊಡೆ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆ ಆಗಿದ್ದರಿಂದ ಈ ಕ್ಷೇತ್ರದ ಮೇಲೆ ಬಿಜೆಪಿ ಹಾಗೂ ಟಿಆರ್ ಎಸ್ ಪಕ್ಷ ದೃಷ್ಟಿ ನೆಟ್ಟಿದೆ.ಟಿಆರ್ ಎಸ್ ನ ಕುಶುಕುಂಟ್ಲಾ ಪ್ರಭಾಕರ ರೆಡ್ಡಿ, ಬಿಜೆಪಿಯ ರಾಜಗೋಪಾಲ ರೆಡ್ಡಿ ಹಾಗೂ ಕಾಂಗ್ರೆಸ್ ನ ಪಳವಿ ಶ‍್ರಾವಂತಿ ಸ್ಪರ್ಧಿಸುತ್ತಿದ್ದಾರೆ.
ಮತ್ತೊಂದೆಡೆ ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಂಡ ನಂತರ ಎದುರಿಸುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಬಿಜೆಪಿ ಹಾಗೂ ಬಿಜೆಡಿ ನಡುವಿನ ಸಂಘರ್ಷದಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಎಂಬ ಕುತೂಹಲ ಮೂಡಿದೆ. ಮೊಕಾಮ ಮತ್ತು ಗೋಪಾಲ್ ಗಂಜ್ ನಲ್ಲಿ ಮತದಾನ ನಡೆಯಲಿದೆ.
ಉತ್ತರ ಪ್ರದೇಶದ ಗೋಲಾ ಗೋರಖ್ ನಾಥ್, ಮಹಾರಾಷ್ಟ್ರದ ಅಂಧೇರಿ ಪೂರ್ವ ಮತ್ತು ಹರಿಯಾಣದ ಅದಂಪುರ್ ನಲ್ಲಿ ಚುನಾವಣೆ ನಡೆಯಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy