ಬೆಂಗಳೂರು: ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು ಅಂತ ಕಾರ್ಯಕರ್ತರು ಹೇಳೋದ್ರಲ್ಲಿ ಅರ್ಥ ಇದೆ. ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ ಅಂತಾ ನಾನೂ ಹೇಳಿದ್ದೇನೆ ಎಂದು ಕುಣಿಗಲ್ ಶಾಸಕ ರಂಗನಾಥ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರದಲ್ಲಿ ಗೊಂದಲ ಆಗುವ ಹೇಳಿಕೆ ಕೊಡಬಾರದು. ಕೆಲವು ವಿಚಾರದಲ್ಲಿ ನನಗೂ ಅಸಮಾಧಾನ ಇದೆ. ಆದರೆ ತುಮಕೂರು ವಿಚಾರದಲ್ಲಿ ನಾನು ಹೋಗಿ ಕೂತು, ನಾಲ್ಕು ಗೋಡೆ ಮಧ್ಯೆ ಬಗೆಹರಿಸಿಕೊಳ್ತೇನೆ ಎಂದಿದ್ದಾರೆ.
ರಾಜಣ್ಣನವರು ನಮ್ಮ ಜಿಲ್ಲೆಯ ಹಿರಿಯ ನಾಯಕರು. ಅವರು ಬೇರೆ ಪಾರ್ಟಿಗೆ ಹೋಗಿ ಬಂದಿರಬಹುದು. ಆದ್ರೆ ಬಿಜೆಪಿಗೆ ಹೋಗೋ ನಿರ್ಧಾರ ಮಾಡಲ್ಲ. ಆ ವಿಚಾರದಲ್ಲಿ ಮಾತಾಡುವಷ್ಟು ನಾನು ದೊಡ್ಡವನಲ್ಲ ಎಂದು ಹೇಳಿದ್ದಾರೆ.
ಹೈಕಮಾಂಡ್ ವಿರುದ್ಧ ಮಾತಾಡಿದ್ದಕ್ಕೆ ವಜಾ ಮಾಡಿದ್ದಾರೆ. ಹೈಕಮಾಂಡ್ ನವರೇ ಮಂತ್ರಿ ಮಾಡಿದ್ದಾರೆ. ರಾಜೇಂದ್ರ ಅವರು ದೊಡ್ಡ ರಾಜಕಾರಣಿ. ಅವರ ಬಗ್ಗೆ ಮಾತಾಡುವಷ್ಟು ದೊಡ್ಡವನಲ್ಲ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC