ಬೆಂಗಳೂರು: ರಾಜ್ಯಾದ್ಯಂತ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಇಂದು ಅಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಹೇಳಿದ್ದಾರೆ.
ರಾಜ್ಯದ ಉತ್ತರ ಒಳನಾಡಿನಲ್ಲೂ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಶೇಕಡಾ 22ರಷ್ಟು ಮಳೆಯಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ನಿರೀಕ್ಷೆಯಿದೆ ಎಂದರು.


