ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, 28 ಕ್ಷೇತ್ರಗಳಲ್ಲೂ ನಾವು ಒಟ್ಟಾಗಿ ಕೆಲಸ ಮಾಡಬೇಕು. ಪ್ರತಿಷ್ಠೆ ಬದಿಗಿಟ್ಟು ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕು ಎಂದರು.
ಈ ಹಿಂದೆ ಬಿಎಸ್ವೈ ಜೊತೆ ಸರ್ಕಾರ ಮಾಡಿದ್ದಾಗ ಒಳ್ಳೆಯ ಆಡಳಿತ ಕೊಟ್ಟಿದ್ದೆವು. ಕೆಲವು ಪರಿಸ್ಥಿತಿಗಳಲ್ಲಿ ಮೈತ್ರಿ ಮುಂದುವರೆಯಲು ಸಾಧ್ಯವಾಗಲಿಲ್ಲ. ಆಗ ನಮ್ಮ ತಂದೆಯವರಿಗೆ ಕೆಲವರು ತಪ್ಪು ಮಾಹಿತಿ ನೀಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಬಾರೀ ನಾವು ಮೈತ್ರಿ ಮಾಡಿಕೊಂಡಿದ್ದರೆ ರಾಜ್ಯದಲ್ಲಿ ಈಗ ಕಾಂಗ್ರೆಸ್ ಬರಲು ಸಾಧ್ಯವಾಗುತ್ತಿರಲಿಲ್ಲ.
ನಮ್ಮಲ್ಲಿದ್ದ ಒಡಕುಗಳಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಾಯಿತು. ಪ್ರತಿದಿನ ಕಾಂಗ್ರೆಸ್ ನಾಯಕರು ಜೆಡಿಎಸ್ ಪಕ್ಷ ಮುಗಿದೆ ಹೋಯಿತು ಎಂದು ಮಾತನಾಡುತ್ತಿದ್ದಾರೆ. ದೇಶದ ಭದ್ರತೆಗೆ ಮೋದಿಯವರ ದುಡಿಮೆ ನೋಡಿದ್ದೇವೆ. ಅಮಿತ್ ಶಾ ಅವರ ಮಧ್ಯಸ್ಥಿಕೆಯಿಂದ ಈ ಮೈತ್ರಿಯಾಗಿದೆ. ಅಭ್ಯರ್ಥಿ ಆಯ್ಕೆಯಲ್ಲಿ ಒಡಕು ಬಂದಿರಬಹುದು, ಅದರಿಂದಾಗಿ ತಾವು ನಿರಾಸೆ ಒಳಗಾದರೆ ಪಕ್ಷಕ್ಕೆ ಹಿನ್ನಡೆಯಾಗುತ್ತದೆ. ಕೆಲವೊಂದು ಕ್ಷೇತ್ರಗಳಲ್ಲಿ ಭಿನ್ನಾಭಿಪ್ರಾಯ ಇದ್ದಾವೆ. ಅದನ್ನು ಸರಿಪಡಿಸಿಕೊಳ್ಳಬೇಕಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296