ಶಿವಮೊಗ್ಗ : ಬಿಜೆಪಿಯಲ್ಲಿ ಕುಟುಂಬ ರಾಜಕಾರಣದ ಮಾತೇ ಉದ್ಭವಿಸೋದಿಲ್ಲ ಅಂತಾ ಬಿಜೆಪಿ ರಾಜ್ಯ ಸಹ ಉಸ್ತುವಾರಿ ಅಣ್ಣಾಮಲೈ ಹೇಳಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಮಾತನಾಡಿದ ಅವರು ನಮ್ಮ ಪಕ್ಷದಲ್ಲಿ ಒಂದೇ ಕುಟುಂಬದ ಒಬ್ಬರಿಗೆ ಮಾತ್ರ ಟಿಕೆಟ್ ನೀಡಲಾಗಿದೆ ಎಂದು ಹೇಳಿದರು.
ಬಿಜೆಪಿಯು ಪಕ್ಷದ ಕಾರ್ಯಕರ್ತನಾಗಿ ದುಡಿದವರನ್ನು ಗುರುತಿಸಿ ಟಿಕೆಟ್ ನೀಡಿದೆ. ಎಲ್ಲೋ ಒಂದೆರಡು ಕಡೆಗಳಲ್ಲಿ ಮಗ – ಸೊಸೆ ಗೆ ಟಿಕೆಟ್ ಸಿಕ್ಕಿರಬಹುದು. ಸುಳ್ಯದಲ್ಲಿ ಬಡ ಕುಟುಂಬಕ್ಕೆ ಸೇರಿದ ಭಾಗೀರಥಿ ಎಂಬವರಿಗೆ ಟಿಕೆಟ್ ನೀಡಲಾಗಿದೆ ಎಂದು ಹೇಳಿದರು.
ಬಿಜೆಪಿಯಲ್ಲಿ ಯಾರನ್ನೂ ರಿಜೆಕ್ಷನ್ ಹಾಗೂ ಸೆಲೆಕ್ಷನ್ ಮಾಡಿಲ್ಲ. ಪಕ್ಷದ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಟಿಕೆಟ್ ನೀಡಲಾಗಿದೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


