nammatumakuru

    Subscribe to Updates

    Get the latest creative news from FooBar about art, design and business.

    What's Hot

    ನ.27ರಂದು ಕನಕದಾಸರ ಜಯಂತ್ಯೋತ್ಸವ ಅದ್ಧೂರಿ ಆಚರಣೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    November 21, 2026

    ಯುವ ರೈತ ಮಹಿಳೆ ಕಾವ್ಯ ದಿನೇಶ್‌ ಗೆ ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಮಹಿಳೆ ಪ್ರಶಸ್ತಿ

    November 21, 2026

    ಕಪ್ಪುತಲೆ ಹುಳು ಬಾಧೆ ನಿಯಂತ್ರಣಕ್ಕೆ ತೆಂಗಿನ ತೋಟಗಳಲ್ಲಿ ಪರಾವಲಂಬಿ ಜೀವಿಗಳ ಬಿಡುಗಡೆ

    November 21, 2026
    Facebook Twitter Instagram
    ಟ್ರೆಂಡಿಂಗ್
    • ನ.27ರಂದು ಕನಕದಾಸರ ಜಯಂತ್ಯೋತ್ಸವ ಅದ್ಧೂರಿ ಆಚರಣೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಯುವ ರೈತ ಮಹಿಳೆ ಕಾವ್ಯ ದಿನೇಶ್‌ ಗೆ ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಮಹಿಳೆ ಪ್ರಶಸ್ತಿ
    • ಕಪ್ಪುತಲೆ ಹುಳು ಬಾಧೆ ನಿಯಂತ್ರಣಕ್ಕೆ ತೆಂಗಿನ ತೋಟಗಳಲ್ಲಿ ಪರಾವಲಂಬಿ ಜೀವಿಗಳ ಬಿಡುಗಡೆ
    • ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಮತ್ತೊಂದಿಲ್ಲ: ಶಾಸಕ ಎಸ್.ಆರ್. ಶ್ರೀನಿವಾಸ್ | ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನೆ
    • ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗದರ್ಶನ ಕಾರ್ಯಾಗಾರ | ಹಳ್ಳಿಗಾಡಿನ ಮಕ್ಕಳೇ ಹೆಚ್ಚು ಧೈರ್ಯಶಾಲಿಗಳು: ಮುರಳೀಧರ ಹಾಲಪ್ಪ
    • ಸತ್ಯ ಘಟನೆಯ “ಕಾಲಾಗ್ನಿ” ಚಿತ್ರಕ್ಕೆ ಮುಹೂರ್ತ |  ಸೆಸ್ಪೆನ್ಸ್, ಥ್ರಿಲ್ಲರ್ ಕುರಿತಾದ ಚಿತ್ರಕ್ಕೆ ರಾಯರ ಸನ್ನಿಧಿಯಲ್ಲಿ ಚಾಲನೆ
    • ಆಶ್ರಯ ನೀಡಿದ ವೈದ್ಯ ದಂಪತಿಗೆ ನಂಬಿಕೆ ದ್ರೋಹ: 800 ಗ್ರಾಂ ಚಿನ್ನಾಭರಣ ಕದ್ದ ಮಹಿಳೆ ಬಂಧನ, ಕೊಲೆ ಸಂಚೂ ಬಯಲು!
    • ಮಕ್ಕಳ ಭವಿಷ್ಯ ರೂಪಿಸಲು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿ: ಡಿಸಿಎಂ ಡಾ.ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಮತ್ತೊಂದಿಲ್ಲ: ಶಾಸಕ ಎಸ್.ಆರ್. ಶ್ರೀನಿವಾಸ್ | ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನೆ
    ಗುಬ್ಬಿ November 21, 2026

    ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಮತ್ತೊಂದಿಲ್ಲ: ಶಾಸಕ ಎಸ್.ಆರ್. ಶ್ರೀನಿವಾಸ್ | ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನೆ

    By Ganesh TumkuruNovember 21, 2026No Comments2 Mins Read
    s r shrinivas

    ಗುಬ್ಬಿ: ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಮತ್ತೊಂದಿಲ್ಲ. ನಾವು ಎಷ್ಟೇ ಸಂಪಾದನೆ ಮಾಡಿದರೂ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಆ ಸಂಪಾದನೆಗೆ ನಿಜವಾದ ಅರ್ಥ ಸಿಗುತ್ತದೆ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ತಿಳಿಸಿದರು.

    ತಾಲ್ಲೂಕಿನ ಮಡೇನಹಳ್ಳಿ ಗ್ರಾಮದಲ್ಲಿ 4.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಈ ಭಾಗದ ಜನರು ಆಸ್ಪತ್ರೆಗಾಗಿ ಒತ್ತಾಯಿಸಿದ ಹಿನ್ನೆಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರು ಮಾಡಲಾಗಿತ್ತು. ಆದರೆ ಸ್ವಂತ ಕಟ್ಟಡದ ಕೊರತೆಯಿಂದಾಗಿ ಹಲವು ವರ್ಷಗಳ ಕಾಲ ಹಾಲಿನ ಕೇಂದ್ರದಲ್ಲಿಯೇ ಆಸ್ಪತ್ರೆ ಕಾರ್ಯನಿರ್ವಹಿಸುತ್ತಿತ್ತು. ಇದೀಗ ಎರಡು ಎಕರೆ ಜಾಗದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದ್ದು, ಈ ಭಾಗದ ಸುಮಾರು 25ರಿಂದ 30 ಸಾವಿರ ಜನರಿಗೆ ಆರೋಗ್ಯ ಸೇವೆ ಪಡೆಯಲು ಅನುಕೂಲವಾಗಲಿದೆ ಎಂದರು.

    ಮುಂದಿನ ದಿನಗಳಲ್ಲಿ ಆಸ್ಪತ್ರೆಗಳಿಗೆ ಮತ್ತಷ್ಟು ಅಗತ್ಯ ಸೌಲಭ್ಯಗಳನ್ನು ಒದಗಿಸಿದರೆ ಗುಬ್ಬಿ ತಾಲ್ಲೂಕಿನಲ್ಲಿಯೇ ಮಾದರಿ ಆಸ್ಪತ್ರೆಯಾಗಿ ರೂಪುಗೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ. ತಾಯಿ ಜನ್ಮ ನೀಡಿದರೆ ವೈದ್ಯರು ಜೀವ ಉಳಿಸುವ ದೇವರಿದ್ದಂತೆ. ವೈದ್ಯರು ಕಾಯಾ, ವಾಚಾ, ಮನಸಾ ಸೇವೆ ಸಲ್ಲಿಸಿದರೆ ಅವರ ವೃತ್ತಿಗೆ ನಿಜವಾದ ಗೌರವ ಸಿಗುತ್ತದೆ. ಸರ್ಕಾರದಿಂದ ದೊರೆಯಬೇಕಾದ ಎಲ್ಲ ಮೂಲಭೂತ ಸೌಲಭ್ಯಗಳನ್ನು ಈ ಆಸ್ಪತ್ರೆಗೆ ಒದಗಿಸಲು ಬದ್ಧನಾಗಿದ್ದೇನೆ. ತಾಲ್ಲೂಕಿನ ಬಿದರೆ ಹಾಗೂ ದೊಡ್ಡಗುಣಿ ಗ್ರಾಮಗಳಲ್ಲಿಯೂ ನೂತನ ಆಸ್ಪತ್ರೆಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಚಂದ್ರಶೇಖರ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಸುಸಜ್ಜಿತ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣವಾಗಿರುವುದು ಸುತ್ತಮುತ್ತಲಿನ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈಗಾಗಲೇ ವೈದ್ಯರನ್ನು ನಿಯೋಜಿಸಲಾಗಿದ್ದು, ಅಗತ್ಯ ಪರಿಕರ ಹಾಗೂ ಸೌಲಭ್ಯಗಳನ್ನು ಹಂತ ಹಂತವಾಗಿ ಒದಗಿಸಲಾಗುವುದು. ಎರಡು ವರ್ಷಗಳಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.

    ಕಾರ್ಯಕ್ರಮದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಆರ್. ವೆಂಕಟೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸವಿತಾ, ಡಾ. ಚೇತನ್, ಮುಖಂಡರಾದ ಹುಂಡೆ ರಾಮಣ್ಣ, ರಾಜುಗೌಡ, ವೆಂಕಟರಮಣಪ್ಪ ಸೇರಿದಂತೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಆಸ್ಪತ್ರೆಯ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ನಿರ್ಗತಿಕರ ಬದುಕಿಗೆ ಆಸರೆಯಾಗಿರುವ ವಾತ್ಸಲ್ಯ ಯೋಜನೆ: ಸತೀಶ್ ಸುವರ್ಣ

    November 19, 2026

    ಚುನಾವಣೆ ನೀತಿ ಸಂಹಿತೆ ಬಳಿಕ ನಿಟ್ಟೂರಿನಲ್ಲಿ ಐದನೇ ಪ್ರಜಾಸೇವಾ ಅಭಿಯಾನ

    November 8, 2026

    ಡಿ. 2026ರೊಳಗೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸುವ ಗುರಿ: ವಿ. ಸೋಮಣ್ಣ

    November 7, 2026

    Leave A Reply Cancel Reply

    Our Picks

    ಮಧ್ಯಪ್ರದೇಶದ ನರ್ಮದಾ ಕಣಿವೆಯಲ್ಲಿ 5 ಲಕ್ಷ ವರ್ಷಗಳ ಹಿಂದಿನ ಪಳೆಯುಳಿಕೆ ಪತ್ತೆ! ಏನದು ?

    November 20, 2026

    ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ

    November 16, 2026

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನ.27ರಂದು ಕನಕದಾಸರ ಜಯಂತ್ಯೋತ್ಸವ ಅದ್ಧೂರಿ ಆಚರಣೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    November 21, 2026

    ತುಮಕೂರು: ಜಿಲ್ಲಾಡಳಿತದ ವತಿಯಿಂದ ನವೆಂಬರ್ 27ರಂದು ಸಂತ ಶ್ರೇಷ್ಠ ಕನಕದಾಸರ ಜಯಂತ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆಗಳನ್ನು…

    ಯುವ ರೈತ ಮಹಿಳೆ ಕಾವ್ಯ ದಿನೇಶ್‌ ಗೆ ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಮಹಿಳೆ ಪ್ರಶಸ್ತಿ

    November 21, 2026

    ಕಪ್ಪುತಲೆ ಹುಳು ಬಾಧೆ ನಿಯಂತ್ರಣಕ್ಕೆ ತೆಂಗಿನ ತೋಟಗಳಲ್ಲಿ ಪರಾವಲಂಬಿ ಜೀವಿಗಳ ಬಿಡುಗಡೆ

    November 21, 2026

    ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಮತ್ತೊಂದಿಲ್ಲ: ಶಾಸಕ ಎಸ್.ಆರ್. ಶ್ರೀನಿವಾಸ್ | ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನೆ

    November 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.