ಬೆಂಗಳೂರು: ನಾಡಧ್ವಜ, ನಾಡದೇವಿ, ರಾಷ್ಟ್ರಧ್ವಜ ಹಾಗೂ ದೇವರಿಗೆ ಜಾತಿ, ಧರ್ಮ ಬಣ್ಣದ ರಾಜಕೀಯ ಲೇಪನ ಮಾಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯ ವಿರೋಧ ಹಾಗೂ ಸಂಸದ ಯದುವೀರ್ ಅವರ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.
ಯದುವೀರ್ ಅವರು ಈಗ ಬಿಜೆಪಿ ಜೊತೆ ಸೇರಿಕೊಂಡು ಬಿಟ್ಟಿದ್ದಾರಲ್ಲ, ಆದ ಕಾರಣಕ್ಕೆ ಇತಿಹಾಸ ಮರೆತು ಬಿಟ್ಟಿದ್ದಾರೆ ಎಂದು ಡಿಕೆಶಿ ಟೀಕಿಸಿದರು.
ಚಾಮುಂಡೇಶ್ವರಿ ಎಲ್ಲಾ ಧರ್ಮದವರಿಗೂ ಆಶೀರ್ವಾದ ಮಾಡುವಂತಹ ದೇವರು. ರಾಜ ವಂಶಸ್ಥರು ಹಾಗೂ ನಂತರ ಬಂದ ಸರ್ಕಾರಗಳು ಚಾಮುಂಡಿ ತಾಯಿಯನ್ನು ನಾಡದೇವಿ ಎಂದು ಕರೆದಿವೆ. ಈ ದೇಗುಲ ಸಾರ್ವಜನಿಕರ ಆಸ್ತಿ. ನಾಡಧ್ವಜ, ನಾಡದೇವಿ, ರಾಷ್ಟ್ರಧ್ವಜ ಹಾಗೂ ದೇವರಿಗೆ ಜಾತಿ, ಧರ್ಮ ಬಣ್ಣದ ರಾಜಕೀಯ ಲೇಪನ ಮಾಡುವ ಅಗತ್ಯವಿಲ್ಲ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


