ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಅಂತಾ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ವಿಧಾನ ಪರಿಷತ್ ಪ್ರಶೋತ್ತರ ಕಲಾಪದಲ್ಲಿ ಶಾಸಕ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದರು. ಆಶಾ ಕಾರ್ಯಕರ್ತೆಯರ ಸಂಬಳ ಜಾಸ್ತಿ ಮಾಡಬೇಕು. ಅವರಿಗೂ ಪಿಂಚಣಿ ಕೊಡಬೇಕು. ಹೊಸ ಸ್ಮಾರ್ಟ್‌ಫೋನ್‌ಗಳನ್ನ ನೀಡಬೇಕು ಅಂತಾ ಆಗ್ರಹಿಸಿದರು.
ಇದಕ್ಕೆ ಉತ್ತರ ನೀಡಿದ ಸಚಿವ ದಿನೇಶ್ ಗುಂಡೂರಾವ್, ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ರಾಜ್ಯ ಸರ್ಕಾರದಿಂದ ಈಗಾಗಲೇ 5 ಸಾವಿರ ಗೌರವ ಧನ ನೀಡಲಾಗ್ತಿದೆ. ಕೇಂದ್ರದಿಂದ 5-8 ಸಾವಿರ ಗೌರವ ಧನ ಸಿಗುತ್ತಿದೆ. ಒಟ್ಟಾರೆ 10-13 ಸಾವಿರ ಗೌರವ ಧನ ಸಿಗುತ್ತಿದೆ. ಸದ್ಯ ಅವರ ಗೌರವ ಧನ ಹೆಚ್ಚಳ ಸಾಧ್ಯವಿಲ್ಲ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


