ಬೆಂಗಳೂರು: ಸಚಿವರು, ಶಾಸಕರ ಹನಿಟ್ರ್ಯಾಪ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ವಿಪಕ್ಷ ನಾಯಕರಾದ ಆರ್. ಅಶೋಕ್, ಆರಗ ಜ್ಞಾನೇಂದ್ರ, ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ.ಎನ್. ರಾಜಣ್ಣ ಹನಿಟ್ರ್ಯಾಪ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದರು.
ಈ ಬಗ್ಗೆ ಮುಖ್ಯಮಂತ್ರಿಗಳು ಉತ್ತರಿಸಿ ಸದನದ ಮೌಲ್ಯವನ್ನು ಎತ್ತಿಹಿಡಿಯಬೇಕೆಂದು ಪ್ರತಿಪಕ್ಷ ಹಾಗೂ ಆಡಳಿತ ಪಕ್ಷ ಕೆಲವು ಮಂದಿ ನಾಯಕರು ಆಗ್ರಹಿಸಿದ್ದರು. ಇದಕ್ಕೆ ಉತ್ತರಿಸಿದ ಸಿಎಂ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.
ಸಚಿವರು ಹಾಗೂ ಪರಿಶಿಷ್ಟ ವರ್ಗದ ನಾಯಕರೂ ಆಗಿರುವ ಕೆ.ಎನ್ ರಾಜಣ್ಣ ಅವರು ಮಾಡಿರುವ ಆರೋಪಕ್ಕೆ ಈಗಾಗಲೇ ಗೃಹ ಸಚಿವ ಜಿಪರಮೇಶ್ವರ ಉತ್ತರಿಸಿದ್ದಾರೆ. ಅಲ್ಲದೆ ತನಿಖೆಗೆ ಆದೇಶಿಸುವುದಾಗಿಯೂ ಭರವಸೆ ನೀಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4