ಚಿನ್ನ, ಬೆಳ್ಳಿಯತ್ತ ಹೂಡಿಕೆಗಳು ಹೆಚ್ಚುತ್ತಿವೆ. ಪರಿಣಾಮವಾಗಿ ಈ ಅಮೂಲ್ಯ ಲೋಹಗಳ ಬೆಲೆ ಏರಿಕೆ ಮುಂದುವರಿಯುತ್ತಿದೆ. ಇಂದು ಬುಧವಾರ ಚಿನ್ನದ ಬೆಲೆ ಗ್ರಾಮ್ ಗೆ 30 ರೂನಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆ ಒಂದು ರೂ ಹೆಚ್ಚಾಗಿದೆ.
ಹಲವು ದೇಶಗಳಲ್ಲಿ ಚಿನ್ನದ ಬೆಲೆ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ ನ 22 ಕ್ಯಾರಟ್ ಚಿನ್ನದ ಬೆಲೆ 66,350 ರೂಪಾಯಿ ಇದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 72,380 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,500 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ ಗೆ 8,400 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 8ಕ್ಕೆ):
22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 66,350 ರೂ
24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 72,380 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 850 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 66,350 ರೂ
24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 72,380 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 840 ರೂ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296