nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026
    Facebook Twitter Instagram
    ಟ್ರೆಂಡಿಂಗ್
    • ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
    • ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
    • ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
    • ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
    • ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
    • ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
    • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಜೆಟ್ ನಲ್ಲಿ ಹೇಳಿಕೊಳ್ಳಬಹುದಾದ ಒಂದೇ ಒಂದು ಯೋಜನೆಯೂ ಸಹ ಇಲ್ಲ: ಸಚಿವ ಹೆಚ್.ಸಿ.ಮಹದೇವಪ್ಪ
    ಜಿಲ್ಲಾ ಸುದ್ದಿ February 1, 2025

    ಬಜೆಟ್ ನಲ್ಲಿ ಹೇಳಿಕೊಳ್ಳಬಹುದಾದ ಒಂದೇ ಒಂದು ಯೋಜನೆಯೂ ಸಹ ಇಲ್ಲ: ಸಚಿವ ಹೆಚ್.ಸಿ.ಮಹದೇವಪ್ಪ

    By adminFebruary 1, 2025No Comments2 Mins Read
    h c mahadevappa

    ಬೆಂಗಳೂರು: ಜನ ಸಾಮಾನ್ಯರ ಪರವಾಗಿ  ಎಂದಿಗೂ ಕೆಲಸ ಮಾಡದೇ ಬರೀ ಕಾರ್ಪೊರೇಟ್ ಉದ್ಯಮಿಗಳ ಪರವಾಗಿ ಕೆಲಸ ಮಾಡುತ್ತಲೇ ಬಂದಿರುವ ಕೇಂದ್ರ ಸರ್ಕಾರವು  ಶ್ರಮಿಕ ವರ್ಗವನ್ನು ವಂಚಿಸುವ ತನ್ನ ಹೀನ ಪ್ರವೃತ್ತಿಯನ್ನು ಮುಂದುವರೆಸಿದೆ ಎಂದು ಸಚಿವ ಹೆಚ್.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕೇಂದ್ರ ಬಜೆಟ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು,  50 ಲಕ್ಷದ 65 ಸಾವಿರ ಕೋಟಿ ಗಾತ್ರದ ಬಜೆಟ್ ನಲ್ಲಿ ಜನಪರವಾಗಿ ಹೇಳಿಕೊಳ್ಳಬಹುದಾದ ಒಂದೇ ಒಂದು ಯೋಜನೆಯೂ ಸಹ ಇಲ್ಲದ ಕೇಂದ್ರದ ಬಜೆಟ್ ಕರ್ನಾಟಕ ವಿರೋಧಿಯಾಗಿದ್ದು ರಾಜ್ಯ ನೀಡುವ ತೆರಿಗೆ ಹಣಕ್ಕೆ ಪ್ರತಿಯಾಗಿ ಅವಮಾನವನ್ನು ನಮಗೆ ಉಡುಗೊರೆಯಾಗಿ ನೀಡಿದೆ,  ಮಧ್ಯಮ ವರ್ಗಕ್ಕೆ 12 ಲಕ್ಷದ ವರೆಗೆ ಆದಾಯ ತೆರಿಗೆ ವಿನಾಯ್ತಿ ಎಂದು ಹೇಳಿ ಆ ಮೂಲಕ ಪ್ರಚಾರ ಪಡೆಯಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರವು ನಿಗದಿ ಪಡಿಸಿರುವ ತೆರಿಗೆ ಮಿತಿಯ slab ನಲ್ಲಿ 8 ರಿಂದ 12 ಲಕ್ಷದವರೆಗಿನ ಆದಾಯ ತೆರಿಗೆಗೆ 10% ತೆರಿಗೆ ಎಂದು ನಮೂದಿಸಿದ್ದು ಜನರನ್ನು ಅಸ್ಪಷ್ಟತೆಗೆ ನೂಕುವ ಕೆಲಸ ಮಾಡಿದೆ ಎಂದು ಆರೋಪಿಸಿದ್ದಾರೆ.

    ಈಗಾಗಲೇ ಇವರ ಹಿಂದಿನ ಘೋಷಣೆಗಳು ಬಹುತೇಕ ಸುಳ್ಳೆಂದು ಸಾಬೀತಾಗಿದ್ದು, ಈ ಗೊಂದಲಗಳೂ ಕೂಡಾ ಕೇಂದ್ರ ಸರ್ಕಾರದ ವಂಚನೆಯ ತಂತ್ರವಾಗಿದೆ ಎಂದು ನಾವು ಊಹಿಸಬಹುದಾಗಿದೆ.  ಹಿಂಬಾಲಕರ ಮೂಲಕ ತನ್ನನ್ನು ವಿಶ್ವಗುರು ಎಂದು ಹೇಳಿಕೊಳ್ಳುವ ಪ್ರಧಾನಿಗಳ ಆಡಳಿತದಲ್ಲಿ ದೇಶದ ಸಾಲವು ಮತ್ತೆ 15.86 ಲಕ್ಷ ಕೋಟಿಗಳಷ್ಟು ಹೆಚ್ಚಾಗಿದ್ದು ಯಾವುದೇ ಯೋಜನೆಗಳಿಲ್ಲದೇ ಯಾರ ಜೇಬು ತುಂಬಿಸಲು ಇವರು ಇಷ್ಟೊಂದು ಸಾಲ ಮಾಡುತ್ತಿದ್ದಾರೆ ಎಂಬುದು ಸದ್ಯದ ಪ್ರಶ್ನೆಯಾಗಿದೆ ಎಂದು ಅವರು ಹೇಳಿದ್ದಾರೆ.

    ಇನ್ನು ಕಾರ್ಪೊರೇಟ್ ತೆರಿಗೆಯ ಪ್ರಮಾಣವು ಯಥಾಸ್ಥಿತಿಯಲ್ಲಿ ಮುಂದುವರೆದಿದ್ದು,  ಸರ್ಕಾರದಿಂದ ಕಾರ್ಪೊರೇಟ್ ಗಳ ಲಕ್ಷಾಂತರ ಕೋಟಿ ಸಾಲ ಮನ್ನಾ ಹೊರತಾಗಿಯೂ ಕಂಪನಿಗಳು ಏಳಿಗೆ ಆಗದೇ ಹಾಗೇ ಉಳಿದಿದ್ದು ಸರ್ಕಾರವು ಖಾಸಗಿಯವರ ಸಾಲವನ್ನು ಜನರ ಮೇಲೆ ಹೊರಿಸುವ ಕೆಲಸ ಮಾಡುತ್ತಿವೆ. ಮುಖ್ಯವಾಗಿ ಬಜೆಟ್ ನಲ್ಲಿ ಎಲ್ಲಿಯೂ ಕೂಡಾ ಉದ್ಯೋಗ ಸೃಷ್ಟಿಯ ಕುರಿತು ಮಾತನಾಡದ ಕೇಂದ್ರ ಸರ್ಕಾರವು ಯುವಕರ ಮೇಲಿನ ತನ್ನ ತಿರಸ್ಕಾರದ ಧೋರಣೆಯನ್ನು ಮುಂದುವರೆಸಿದೆ ಎಂದರು.

    ಅತಿ ಮುಖ್ಯವಾಗಿ ದೇಶದ ಬೆನ್ನೆಲುಬು ಆಗಿರುವ ರೈತರಿಗೆ ಯಾವುದೇ ರೀತಿಯ ಉಪಯುಕ್ತ ಯೋಜನೆಗಳನ್ನು ನೀಡದ ಕೇಂದ್ರ ಸರ್ಕಾರವು ತಾನು ಸದಾ ರೈತ ವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ಟೀಕಿಸಿದರು.

    ಅತಿ ಮುಖ್ಯವಾಗಿ ಕರ್ನಾಟಕದಿಂದ ರಾಜ್ಯ ಸಭಾ ಸದಸ್ಯರಾಗಿ ಆಯ್ಕೆಯಾಗಿ, ಕೇಂದ್ರದಲ್ಲಿ ಹಣಕಾಸು ಸಚಿವೆಯೂ ಆಗಿರುವ ನಿರ್ಮಲಾ ಸೀತಾರಾಮನ್ ಅವರು, ಮೇಕೆದಾಟು, ಕಳಸಾ ಬಂಡೂರಿ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಯಾವುದೇ ಅನುದಾನ ನೀಡದೇ ಹೆಚ್ಚು ತೆರಿಗೆ ಪಾವತಿಸುವ ನಮ್ಮ ರಾಜ್ಯಕ್ಕೆ  ವಂಚನೆ ಮಾಡಿದ್ದು ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದರು.

    ನಮ್ಮ ಸಮಾಜ ಕಲ್ಯಾಣ ಇಲಾಖೆಗೆ ಕೇಂದ್ರದಿಂದ ಬರಬೇಕಿದ್ದ 245 ಕೋಟಿ ರೂಪಾಯಿಗಳ ಪೈಕಿ ಕೇವಲ 58.08 ಕೋಟಿ ರೂಪಾಯಿಗಳಷ್ಟು ಅನುದಾನವು ಬಿಡುಗಡೆ ಆಗಿದ್ದು,  ಉಳಿಕೆ ಹಣವನ್ನು ಬಿಡುಗಡೆ ಮಾಡುವಲ್ಲಿ ಕೇಂದ್ರ ಸರ್ಕಾರವು ವಿಳಂಬ ಮಾಡುತ್ತಿದ್ದು ಇದು ಪರಿಶಿಷ್ಟ ಸಮುದಾಯಗಳ ವಿರೋಧಿ ಧೋರಣೆಗೆ ಹಿಡಿದ ಕನ್ನಡಿ ಆಗಿದ್ದು ಈ ನಿರ್ಲಕ್ಷ್ಯವನ್ನು ನಾನು ಖಂಡಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    Comments are closed.

    Our Picks

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಔರಾದ್‌/ಬೀದರ್ : ಗ್ರಾಮೀಣ ಪ್ರದೇಶಗಳಲ್ಲಿ ವಿಬಿ–ಜಿ ರಾಮ್‌ ಜಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಎನ್‌ ಎಂಎಂಎಸ್‌ (NMMS)…

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.