ಬೆಂಗಳೂರು: ಮುಸ್ಲಿಮರಿಗೆ ಅನುದಾನ ನೀಡುವುದರಲ್ಲಿ ತಪ್ಪೇನಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ. ಈ ಮೂಲಕ, ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧಾರ್ಮಿಕ ಮುಖಂಡರ ಸಮಾವೇಶದಲ್ಲಿ ತಾವಾಡಿದ್ದ ಮಾತುಗಳನ್ನು ಸಮರ್ಥಿಸಿಕೊಂಡಿದ್ದಾರೆ.
ಮುಸ್ಲಿಮರಿಗೆ ದೇಶದ ಸಂಪತ್ತನ್ನು ಹಂಚಬೇಕು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ತಮ್ಮ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ಮುಸ್ಲಿಮರು ಸೇರಿದಂತೆ ಎಲ್ಲರನ್ನೂ ರಕ್ಷಿಸುತ್ತೇವೆ ಎಂದು ಹೇಳಿದ್ದೇನೆ. ಇದು ಓಲೈಕೆಯೇ, ತುಷ್ಟೀಕರಣವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


