ಕನ್ನಡ ನಾಡಿನಲ್ಲಿ ಕನ್ನಡ ನಾಮಫಲಕ ಇರಬೇಕು. ಈ ಸಂಬಂಧ ನಿಯಮ ಜಾರಿಗೆ ತರುವ ಚಿಂತನೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರಣಿ ಮಾಡಿದ್ದಕ್ಕೆ ಕರವೇ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಂಡಿಲ್ಲ. ಯಾರೇ ಆದರೂ ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು. ಆದರೆ ಅವರು ಕಾನೂನು ಕೈಗೆತ್ತಿಕೊಂಡಿದ್ದಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದರು.
ಇನ್ನೂ ಇಂದು ಮಧ್ಯಾಹ್ನ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದು, ಅಂಗಡಿ ಮುಗ್ಗಟ್ಟುಗಳ ಮುಂಭಾಗ ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.


