ತುಮಕೂರು: ಮುಖ್ಯಮಂತ್ರಿಗಳ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷವಾಗದಂತೆ ಕ್ರಮವಹಿಸಬೇಕೆಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಮುಖ್ಯಮಂತ್ರಿಗಳ ಭೇಟಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಲು ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಕಟ್ಟಡದ ತಾರಸಿ ಮೇಲ್ಭಾಗದಲ್ಲಿ ಮರದ ಎಲೆಗಳು ಬಿದ್ದು ಸ್ವಚ್ಛಗೊಳಿಸದೆ ಮಳೆ ನೀರು ನಿಂತು ಕಟ್ಟಡಗಳ ಮೇಲ್ಚಾವಣಿ ಬೀಳುವ ದುಸ್ಥಿತಿಗೆ ತಲುಪುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡು ಅಭಿಯಾನದಡಿ ಕಚೇರಿ ಕಟ್ಟಡಗಳ ಮೇಲ್ಚಾವಣಿ ಹಾಗೂ ಸುತ್ತಮುತ್ತಲೂ ಸ್ವಚ್ಛತೆ ಕಾಪಾಡಬೇಕು ಎಂದು ನಿರ್ದೇಶನ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q