ಮತದಾನ ಪ್ರಕ್ರಿಯೆ ಮುಗಿದ ಬಳಿಕ ರಾತ್ರಿ 11ಗಂಟೆಗೆ ವಾಪಾಸಾಗುತ್ತಿದ್ದ ವೇಳೆ ಬಸ್ಸಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಘಟನೆ ಬೀತುಲ್ ಜಿಲ್ಲೆಯಾ ಗೋಲಾ ಗ್ರಾಮದಲ್ಲಿ ನಡೆದಿದೆ.
ಬಸ್ ನಲ್ಲಿ ಆರು ಜನ ಸಿಬ್ಬಂದಿ ಮತ್ತು ಆರು ಇವಿಎಂ ಯಂತ್ರಗಳು ಇದ್ದವು. ನಾಲ್ಕು ಇವಿಎಂ ಯಂತ್ರಗಳು ಹಾನಿಗೊಳಗಾಗಿದ್ದು, ಎರಡು ಇವಿಎಂಗಳು ಸುರಕ್ಷಿತವಾಗಿದೆ ಎಂದು ಜಿಲ್ಲಾಧಿಕಾರಿ ಸೂರ್ಯವಂಶಿ ಹೇಳಿದ್ದಾರೆ.
ಇನ್ನು ಈ ಘಟನೆಯಿಂದ ಮತ ಎಣಿಕೆ ಮೇಲೆ ಏನಾದರೂ ಪ್ರಭಾವ ಬೀರಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಘಟನೆ ಬಗ್ಗೆ ಈಗಾಗಲೇ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲಾಗಿದೆ. ಅವರು ಆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಒಂದು ವೇಳೆ ಮರು ಮತದಾನದ ಅವಶ್ಯಕತೆ ಇದ್ದಲ್ಲಿ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296