ರಾಜ್ ಕುಮಾರ್ ಕುಟುಂಬದ ಕುಡಿ ಯುವ ರಾಜ್ ಕುಮಾರ್ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ.ಪತ್ನಿಯಿಂದ ಅಗೌರವ ಹಾಗೂ ಮಾನಸಿಕ ಕ್ರೌರ್ಯ ಉಂಟಾಗಿದೆ ಎಂದು ಯುವ ವಿಚ್ಛೇದನ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾರೆ.
ಇಬ್ಬರ ಮದುವೆಗೆ ರಾಘವೇಂದ್ರ ದಂಪತಿಯ ವಿರೋಧ ಇತ್ತು ಎಂದು ಮೂಲ ತಿಳಿಸಿದೆ. ಇಬ್ಬರ ಮದುವೆಗೆ ರಾಘವೇಂದ್ರ ದಂಪತಿಯ ವಿರೋಧ ಇದ್ದರೂ, ಪುನೀತ್ ರಾಜ್ ಕುಮಾರ್ ಮುಂದೆ ನಿಂತು ಮದುವೆ ಮಾಡಿಸಿದ್ದರು ಎನ್ನಲಾಗಿದೆ.

ಶ್ರೀದೇವಿ ಮತ್ತು ಯುವ ರಾಜ್ ಕುಮಾರ್ ಪರಸ್ಪರ 7 ವರ್ಷಗಳಿಂದ ಪರಿಚಿತರಾಗಿದ್ದರು. ಶ್ರೀದೇವಿ ಅವರು ರಾಜ್ ಅಕಾಡೆಮಿ ನಡೆಸಿಕೊಂಡು ಹೋಗುತ್ತಿದ್ದರು. ಮೈಸೂರು ಮೂಲದ ಹುಡುಗಿ ಶ್ರೀದೇವಿಯನ್ನ ವರಿಸಿದ್ದ ಯುವ ಈಗ ಪತ್ನಿ ಮಾನಸಿಕವಾಗಿ ಟಾರ್ಚರ್ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿ ಕೇಸ್ ಕೂಡ ದಾಖಲಿಸಿದ್ದಾರೆ.
ಕಳೆದೊಂದು ವರ್ಷದಿಂದ ದಂಪತಿ ದೂರವೇ ಇದ್ದರು ಎನ್ನಲಾಗಿದೆ. ಸದ್ಯ ಅಮೆರಿಕಾದಲ್ಲಿ ಶ್ರೀದೇವಿ ಉನ್ನತ ಶಿಕ್ಷಣಕ್ಕಾಗಿ ವಾಸಿಸುತ್ತಿದ್ದಾರೆ. ಯುವ ಡಿವೋರ್ಸ್ ನೋಟಿಸ್ ಗೆ ಶ್ರೀದೇವಿ ಅವರು ಯಾವುದೇ ರೀತಿಯ ಪ್ರತಿಕ್ರಿಯೆ ಇನ್ನೂ ನೀಡಿಲ್ಲ. ʻಯುವ ವಿಚ್ಚೇದನಕ್ಕೆ ಅರ್ಜಿ ಹಾಕಿರೋದು ನಿಜ. ಇನ್ನೂ ವಿಚ್ಛೇದನ ಸಿಕ್ಕಿಲ್ಲ. ಸದ್ಯಕ್ಕೆ ಶ್ರೀದೇವಿ ಅಮೆರಿಕಾದಲ್ಲಿದ್ದಾರೆʼʼಎಂದು ರಾಜ್ ಕುಟುಂಬದ ಆಪ್ತ ಮೂಲ ಮಾಹಿತಿ ನೀಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


