ಬೆಂಗಳೂರು: ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಗನ್ ತೋರಿಸಿ 40 ಲಕ್ಷ ರೂಪಾಯಿ ದರೋಡೆ ಮಾಡಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ರಾತ್ರಿ 8 ಗಂಟೆ ಸುಮಾರಿಗೆ ವರ್ನಾ ಕಾರಿನಲ್ಲಿ ಬಂದಿದ್ದ ದರೋಡೆಕೋರರು, ಇದ್ದಕ್ಕಿದ್ದಂತೆ ಮನೆಗೆ ನುಗ್ಗಿದ್ದಾರೆ. ಬಳಿಕ ಗನ್ ತೋರಿಸಿ, ಹೆದರಿಸಿ ಕಳ್ಳತನ ಮಾಡಿದ್ದಾರೆ.
ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಹಕಾರ ನಗರದಲ್ಲಿ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಘಟನೆ ನಡೆದ ಅಕ್ಕ ಪಕ್ಕ ಸಿಸಿ ಕ್ಯಾಮರಾಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296