ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ಕೇಸ್ ಗೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಹಾಗೂ ಕುಮಾರಸ್ವಾಮಿ ನಡುವೆ ಮಾತಿನ ಯುದ್ಧ ಮುಂದುವರಿದಿದೆ.
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ನೂರಾರು ಮಹಿಳೆಯರ ಜೊತೆ ರಾಸಲೀಲೆ ನಡೆಸಿರುವ ವಿಡಿಯೋಗಳ ಹಿಂದೆ ಡಿಕೆಶಿ ಕೈವಾಡ ಇದೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದು, ಈ ಆರೋಪಕ್ಕೆ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಮಹಿಳೆಯರ ಬಗ್ಗೆ ಅಪಾರ ಗೌರವ ಇದೆ, ಇಂಥ ಚಿಲ್ಲರೆ ಕೆಲಸಗಳನ್ನು ಯಾವತ್ತೂ ಮಾಡಲ್ಲ. ಪೆನ್ ಡ್ರೈವ್ ಇದೆ ಎಂದು ಹೆದರಿಸಲ್ಲ. ನಾವು ಚುನಾವಣೆಯನ್ನ ಎದುರಿಸುತ್ತೇವೆ. ನೇರವಾಗಿ ಅಸಂಬ್ಲಿಯಲ್ಲಿ ಚರ್ಚೆ ಮಾಡುತ್ತೇವೆ. ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ ಎಂದು ಡಿಕೆಶಿ ತಿರುಗೇಟು ನೀಡಿದ್ದಾರೆ.
ಇಂಥವರನ್ನ ಭಗವಂತನೂ ಕ್ಷಮಿಸಲ್ಲ. ಕುಮಾರಸ್ವಾಮಿ ಅವರಿಗೆ ನನ್ನನ್ನು ನೆನಪಿಸಿಕೊಂಡಿಲ್ಲ ಅಂದ್ರೆ ನಿದ್ರೆ ಬರಲ್ಲ. ಪ್ರಜ್ವಲ್ ರೇವಣ್ಣ ಅವರ ಪ್ರಕರಣದ ಬಗ್ಗೆ ಎಸ್ ಐಟಿ ತನಿಖೆ ನಡೆಯುತ್ತಿದೆ. ಕಾನೂನು ಪ್ರಕಾರ ಏನು ಆಗಬೇಕೋ, ಅದು ಆಗುತ್ತದೆ. ಹಾಗೆಯೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವಾಗ ಅವರ ಜತೆಗೆ ಇದ್ದವರು ಯಾರು? ಯಾರು ಯಾರಿಗೆ ಕರೆ ಮಾಡಿದ್ರು ಅನ್ನೋದನ್ನ ಅವರನ್ನೇ ಕೇಳಬೇಕು. ಇದು ಹಳೇ ವಿಡಿಯೋ ಎಂದು ಎಚ್.ಡಿ.ರೇವಣ್ಣ ಹೇಳಿದ್ದಾರೆ. ಅಂದರೆ ಪ್ರಜ್ವಲ್ ವಿಡಿಯೋ ಬಗ್ಗೆ ರೇವಣ್ಣ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಗುಸುಗುಸು ಚರ್ಚೆಯಾಗಿದ್ದು, ಈಗ ಬಹಿರಂಗವಾಗಿದೆ. ಬಿಜೆಪಿಯವರು ಈ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ಎನ್ನುವುದು ಎಲ್ಲರ ಪ್ರಶ್ನೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


