ಬೆಂಗಳೂರು: ನಗರದ ಟಿಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾರ್ ಗೆ ನುಗ್ಗಿದ ಇಬ್ಬರು ಕಳ್ಳರು ಬಾರ್ ನಲ್ಲಿದ್ದ ಹಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
ಕಳೆದ ರಾತ್ರಿ 2.30ರ ಸುಮಾರಿಗೆ ಟಿಸಿಪಾಳ್ಯದ ಬಳಿ ಇರುವ ಭಾಗ್ಯ ಬಾರ್ ಗೆ ಎಂಟ್ರಿಕೊಟ್ಟು ಇಬ್ಬರು ಕಳ್ಳರು ತಮ್ಮ ಕೈಚಳಕವನ್ನು ತೋರಿದ್ದಾರೆ.
ಕಳ್ಳತನಕ್ಕೂ ಮುನ್ನ ತಮ್ಮ ಗುರುತು ಪತ್ತೆಯಾಗಬಾರದು ಎಂದು ತಲೆಗೆ ಹೆಲ್ಮೆಟ್ ಧರಿಸಿ ಬಂದು ಬಾರ್ ಶೆಟರ್ ಮುರಿದು ಬಾರ್ ಕ್ಯಾಶ್ ಕೌಂಟರ್ ನಲ್ಲಿದ್ದ 60 ಸಾವಿರ ಹಣವನ್ನು ಕದ್ದಿದ್ದಾರೆ ಇದೇ ವೇಳೆ ಬಾರ್ ನಲ್ಲಿದ್ದ ಸಿಸಿಟಿವಿಯ ಡಿವಿಆರ್ ಸಮೇತ ಕಳ್ಳರು ಪರಾರಿಯಾಗಿದ್ದಾರೆ. ದೃಶ್ಯಗಳು ಸಿಸಿಟಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಕೆ ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


