ಮಠಕ್ಕೆ ಭಕ್ತರ ವೇಷದಲ್ಲಿ ಬಂದಿದ್ದ ಅಪರಿಚಿತರಿಬ್ಬರು ₹40 ಲಕ್ಷ ಮೌಲ್ಯದ ನಗನಾಣ್ಯ ಲೂಟಿ ಮಾಡಿ ಪರಾರಿಯಾದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಇಳಕಲ್ಲ ವಿಜಯ ಮಹಾಂತೇಶ್ವರ ಮಠದಲ್ಲಿ ನಡೆದಿದೆ.
ಗುರುವಾರ ಮಧ್ಯರಾತ್ರಿ ಮಠಕ್ಕೆ ಭಕ್ತರ ವೇಷದಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿಗಳು ಮಠದೊಳಗೆ ಬಂದಾಗ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಕೈಯಲ್ಲಿ ಪಿಸ್ತೂಲ್ ಹಿಡಿದು ಜೀವ ಬೆದರಿಕೆ ಹಾಕಿ ಕಪಾಟು ಹಾಗೂ ಟ್ರಂಕ್ ಗಳಲ್ಲಿದ್ದ 7 ತೊಲ ಚಿನ್ನ, 10 ಕೆ.ಜಿ ಬೆಳ್ಳಿ, ಅಂದಾಜು ₹20 ಲಕ್ಷ ನಗದು ದೋಚಿಕೊಂಡು ಹೋಗಿದ್ದಾರೆ.
ಪಾದ ಮತ್ತು ಇಷ್ಟಲಿಂಗ ಪೂಜೆಗೆ ಬಳಸುವ ಬೆಳ್ಳಿ ಸಾಮಗ್ರಿಗಳು, ಚಿನ್ನದ ಕರಡಿಗೆ ಮತ್ತು ಸುತ್ತುಂಗುರಗಳನ್ನು ಲೂಟಿ ಮಾಡಿಕೊಂಡು ಹೋಗಿದ್ದಾರೆ ಎಂದು ಶಾಖಾ ಮಠದ ಸಿದ್ಧಲಿಂಗ ಸ್ವಾಮೀಜಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹರೀಶಬಾಬು , ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್ ಸ್ಥಳಕ್ಕೇ ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


