ತುಮಕೂರು ನಗರದ ಹೃದಯ ಭಾಗದಲ್ಲಿರುವ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಸೇರಿದ ಎಟಿಎಂನ್ನು ಕತ್ತರಿಸಿದ ಕಳ್ಳರು, ಸುಮಾರು 2,90,000 ರೂ. ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ.
ಎಸ್ ಪಿ ಕಚೇರಿ ಬಳಿಯಿರುವ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಪಕ್ಕದಲ್ಲೇ ಎಟಿಎಂ ಇದ್ದು, ಈ ಎಟಿಎಂಗೆ ನುಗ್ಗಿದ ಕಳ್ಳರು ಗ್ಯಾಸ್ ಕಟರ್ ಬಳಸಿ, ವ್ಯವಸ್ಥಿತವಾಗಿ ಎಟಿಎಂ ಮಷೀನ್ ಅನ್ನು ತುಂಡು ಮಾಡಿದ್ದಾರೆ.
ಬಿಎಚ್ ರಸ್ತೆಗೆ ಹೊಂದಿಕೊಂಡಂತೆ ಇರುವ ಈ ಎಟಿಎಂ ಮಷೀನ್ ಅನ್ನು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಗ್ಯಾಸ್ ಕಟರ್ ಬಳಸಿ ಮೆಷಿನ್ ಅನ್ನು ತುಂಡರಿಸಲಾಗಿದೆ.ಈ ಸಂಬಂಧ ಸ್ಥಳಕ್ಕೆ ಡಿವೈಎಸ್ಪಿ ಶ್ರೀನಿವಾಸ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಎನ್ ಎಪಿಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


