ಪಾವಗಡ: ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ ಕಳ್ಳರು ಬೆಳ್ಳಿ ಆಭರಣ ಮತ್ತು ನಗದು ಕಳ್ಳತನ ಮಾಡಿಕೊಂಡು ಪರಾರಿಯಾಗಿರುವ ಘಟನೆ ಕುವೆಂಪು ನಗರ ಎರಡನೇ ವಾರ್ಡ್ ನಲ್ಲಿ ನಡೆದಿದೆ.
ನಿವೃತ್ತ ಶಿಕ್ಷಕರಾದ ಹುಲಿ ರಾಜು ರವರು ಸಂಬಂಧಿಕರ ಮದುವೆಗಾಗಿ ಕುಟುಂಬ ಸಮೇತರಾಗಿ ಚಳ್ಳಕೆರೆಗೆ ಹೋಗಿದ್ದರು. ಅಂತಹ ಸಮಯದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಒಂದು ಕೆ.ಜಿ. ಬೆಳ್ಳಿ ಸೇರಿದಂತೆ 30,000 ನಗದು ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತೀಚಿನ ದಿನಗಳಲ್ಲಿ ಪಟ್ಟಣದಲ್ಲಿ ಕಳ್ಳತನ ಹೆಚ್ಚಾಗಿದ್ದು ಸಾರ್ವಜನಿಕರು ಭಯಭೀತರಾಗಿದ್ದಾರೆ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹುಲಿರಾಜುರವರ ಸಹೋದರ ಮಾತನಾಡಿ, ಕೆಲವು ದಿನಗಳಿಂದ ಕಳ್ಳತನ ಪ್ರಕರಣಗಳು ಜಾಸ್ತಿಯಾಗಿವೆ, ಆದ್ದರಿಂದ ಪುರಸಭೆ ವತಿಯಿಂದ ಬೀದಿ ದೀಪಗಳನ್ನು ಹಾಕಿಸಬೇಕು ಸಿಸಿಟಿವಿಗಳನ್ನು ಅಳವಡಿಸಬೇಕು, ಈ ಬಗ್ಗೆ ಶಾಸಕರ ಗಮನಕ್ಕೆ ತರಲಾಗುವುದು. ಕಳ್ಳತನ ಪ್ರಕರಣಗಳು ಹೀಗೆಯೇ ಮುಂದುವರೆದರೆ ಪಟ್ಟಣದಲ್ಲಿ ಸಾರ್ವಜನಿಕರು ಜೀವನ ನಡೆಸುವುದು ಕಷ್ಟವಾಗುತ್ತದೆ ಎಂದು ತಿಳಿಸಿದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA