ತುಮಕೂರು: ನಿಧಿ ಆಸೆಗಾಗಿ ಚೋರರು ಬಂಡೆಗಳನ್ನು ಕೊರೆದು ಶೋಧ ನಡೆಸಿರುವ ಘಟನೆ ತುಮಕೂರು ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ನಡೆದಿದೆ.
ವಡ್ಡರಹಳ್ಳಿ ಗ್ರಾಮದ ಬನವಾಸಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ವಡ್ಡರಹಳ್ಳಿ ಗ್ರಾಮದಿಂದ ಹೊರಭಾಗದಲ್ಲಿರುವ ಬನವಾಸಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ನಿಧಿಗಾಗಿ ಮಧ್ಯರಾತ್ರಿ ಮೂರು ಕಡೆ ಬಂಡೆ ಕೊರೆದಿದ್ದಾರೆ.
ಅರಿಶಿನ ಕುಂಕಮ, ತೆಂಗಿನಕಾಯಿ ಹಾಗೂ ವಸ್ತ್ರವನ್ನಿಟ್ಟು ಪೂಜೆ ಮಾಡಿರುವ ಕಿಡಿಗೇಡಿಗಳು. ನಿಧಿ ಸಿಗದೇ ಅರ್ಧಕ್ಕೆ ಬಿಟ್ಟು ಪರಾರಿಯಾಗಿದ್ದಾರೆ.
ದೇವಸ್ಥಾನಕ್ಕೆ ಪೂಜೆ ಮಾಡಲು ಬಂದ ಅರ್ಚಕರಿಂದ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಗ್ರಾಮಸ್ಥರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವಸ್ಥಾನಕ್ಕೆ ಭದ್ರತೆ ಕೊಡುವಂತೆ ಪೊಲೀಸರಿಗೆ ಗ್ರಾಮಸ್ಥರಿಂದ ಮನವಿ ಸಲ್ಲಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296