ತುಮಕೂರು: ಪಾವಗಡ ತಾಲೂಕಿನ ತಿಮ್ಮಮ್ಮನಹಳ್ಳಿಯಲ್ಲಿ ನಡೆದ ಗುಂಪು ಘರ್ಷಣೆ ಸಂಬಂಧ ತಿರುಮಣಿ ಪೊಲೀಸರು 7 ಮಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಾಲು ಉತ್ಪಾದಕರ ಸಹಕಾರ ಸಂಘದ ವಿಚಾರವಾಗಿ ಗ್ರಾಮದಲ್ಲಿ ಹಲವು ತಿಂಗಳುಗಳಿಂದ ಶೀತಲ ಸಮರ ನಡೆಯುತ್ತಿತ್ತು. ಹಿಂದಿನ ಅಧ್ಯಕ್ಷ, ಕಾರ್ಯದರ್ಶಿ ದಾಖಲೆ ನೀಡುತ್ತಿಲ್ಲ ಎಂದು ಹಾಲಿ ಚುನಾವಣೆಯಲ್ಲಿ ಜಯಗಳಿಸಿದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಆರೋಪಿಸಿದ್ದರು.
ಈಗಿನ ಅಧ್ಯಕ್ಷ, ಪದಾಧಿಕಾರಿಗಳು ಹಾಲಿನ ಅಳತೆಯಲ್ಲಿ ಮೋಸ ಮಾಡುತ್ತಿದ್ದಾರೆ ಎಂದು ಮತ್ತೊಂದು ಗುಂಪು ಆರೋಪ ಮಾಡುತ್ತಿತ್ತು. ಕ್ಷುಲ್ಲಕ ಕಾರಣವನ್ನು ಮುಂದಿಟ್ಟುಕೊಂಡು ಎರಡು ಗುಂಪುಗಳವರು ಮಚ್ಚು, ಕೋಲು ಇತ್ಯಾದಿಗಳಿಂದ ಹಲ್ಲೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ತಿರುಮಣಿ ಪೊಲೀಸರು ಭೇಟಿ ನೀಡಿ ಹೆಚ್ಚಿನ ಅನಾಹುತವಾಗುವುದನ್ನು ತಡೆದಿದ್ದಾರೆ. ಈ ಸಂಬಂಧ 40ಕ್ಕೂ ಹೆಚ್ಚಿನವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಗ್ರಾಮದಲ್ಲಿ ಪೊಲೀಸ್ ತುಕಡಿಯೊಂದನ್ನು ನಿಯೋಜಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


