nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯಕ್ಕೆ ಜೋಶಿ, ಕುಮಾರಸ್ವಾಮಿ ಕೊಡುಗೆ ಏನು?: ಬಹಿರಂಗ ಚರ್ಚೆಗೆ ಪ್ರದೀಪ್ ಈಶ್ವರ್ ಸವಾಲು

    June 19, 2025

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಮೆಟ್ರೋ ನಿಲ್ದಾಣದ ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತವಿಲ್ಲ: BMRCL ಸ್ಪಷ್ಟನೆ

    June 19, 2025
    Facebook Twitter Instagram
    ಟ್ರೆಂಡಿಂಗ್
    • ರಾಜ್ಯಕ್ಕೆ ಜೋಶಿ, ಕುಮಾರಸ್ವಾಮಿ ಕೊಡುಗೆ ಏನು?: ಬಹಿರಂಗ ಚರ್ಚೆಗೆ ಪ್ರದೀಪ್ ಈಶ್ವರ್ ಸವಾಲು
    • `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ
    • ಮೆಟ್ರೋ ನಿಲ್ದಾಣದ ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತವಿಲ್ಲ: BMRCL ಸ್ಪಷ್ಟನೆ
    • ಶೌಚಗುಂಡಿ ಗುಂಡಿಯಲ್ಲಿ ಪತ್ತೆಯಾಯ್ತು ಮಾನವನ ಅಸ್ಥಿಪಂಜರ!
    • ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ಹಣ ವಂಚನೆ ಆರೋಪ
    • ಹಿಟ್ಲರ್ ರಾಜಕಾರಣ ಮಾಡಬೇಡಿ, ನಿಮ್ಮ ದರ್ಪಕ್ಕೆ, ಧಮ್ಕಿಗೆ ಯಾರು ಹೆದರುವುದಿಲ್ಲ: ಸಚಿವ ಕೆ.ಎನ್.ರಾಜಣ್ಣ ವಿರುದ್ಧ  ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
    • ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ
    • “ಸಮಯೋಚಿತ ಕುಡಿಯುವ ನೀರು ಉಳಿಸಬಲ್ಲದು ಹಲವು ಮೂಕ ಪ್ರಾಣಿಗಳ ಜೀವ”
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 14 ಪಂಚಾಯತಿಗಳನ್ನು ನಗರ ವ್ಯಾಪ್ತಿಗೆ ಒಳಪಡಿಸುವ ಚಿಂತನೆ: ಡಾ.ಜಿ. ಪರಮೇಶ್ವರ್
    ತುಮಕೂರು June 11, 2025

    14 ಪಂಚಾಯತಿಗಳನ್ನು ನಗರ ವ್ಯಾಪ್ತಿಗೆ ಒಳಪಡಿಸುವ ಚಿಂತನೆ: ಡಾ.ಜಿ. ಪರಮೇಶ್ವರ್

    By adminJune 11, 2025No Comments2 Mins Read
    g parameshwar

    ತುಮಕೂರು:  ತುಮಕೂರು ನಗರದ ವ್ಯಾಪ್ತಿಯನ್ನು ವಿಸ್ತರಿಸುವ ಸಂಬಂಧ 14 ಗ್ರಾಮ ಪಂಚಾಯಿತಿಗಳನ್ನು ನಗರ ವ್ಯಾಪ್ತಿಗೆ ಒಳಪಡಿಸುವ ಚಿಂತನೆಯ ಇಂಗಿತವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ವ್ಯಕ್ತಪಡಿಸಿದರು.

    ನಗರದ ಹೊರವಲಯ ಮೈದಾಳ ರಸ್ತೆಯಲ್ಲಿರುವ ಶ್ರೀ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸ್ನಾತಕೋತ್ತರ ಮಹಿಳೆಯರ ವಿದ್ಯಾರ್ಥಿ ನಿಲಯಕ್ಕೆ ಮಂಗಳವಾರ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ನಗರವನ್ನು ವಿಸ್ತರಿಸುವ ಪ್ರಸ್ತಾವನೆ ಸಿದ್ಧವಿದ್ದು, ಹಂತ ಹಂತವಾಗಿ ವಿಸ್ತರಣಾ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.


    Provided by

    ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈಗಾಗಲೇ ಮನೆ ಕಟ್ಟಿಕೊಂಡು ವಾಸವಿರುವ ನಿವಾಸಿಗಳು ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಅವರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಮರ್ಪಕ ಕುಡಿಯುವ ನೀರು, ರಸ್ತೆ, ಒಳಚರಂಡಿ ವ್ಯವಸ್ಥೆಯಿಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ನಗರ ವಿಸ್ತರಣೀಕರಣದಿಂದ ನಾಗರಿಕರಿಗೆ ಮೂಲಭೂತ ಸೌಕರ್ಯಗಳು ತಲುಪುತ್ತವೆ ಎಂದು ತಿಳಿಸಿದರು.

    ಬಹು ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರ ವ್ಯಾಪ್ತಿಯು ಈಗಾಗಲೇ ನೆಲಮಂಗಲದವರೆಗೂ ತಲುಪಿದ್ದು, ತುಮಕೂರನ್ನೂ ಸಹ ತಲುಪುವ ಸಾಧ್ಯತೆ ಇದೆ. ನಗರದ ಬೆಳವಣಿಗೆಯನ್ನು ಮನಗಂಡ ಸರ್ಕಾರವು ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಪರಿಗಣಿಸಲು ಆದೇಶ ಹೊರಡಿಸಿದೆ. ಇದೇ ಮಾದರಿಯಲ್ಲಿಯೇ ಮುಂದಿನ ದಿನಗಳಲ್ಲಿ ತುಮಕೂರನ್ನೂ ಸಹ ಬೆಂಗಳೂರು ಉತ್ತರ ಎಂದು ಪರಿಗಣಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.

    ರಾಜ್ಯದ ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು ಸೇರಿದಂತೆ  ನಾಲ್ಕೈದು ಜಿಲ್ಲೆಗಳಲ್ಲಿ ಗಣಿಗಾರಿಕೆ ನಡೆಯುತ್ತಿದ್ದು, ಗಣಿಗಾರಿಕೆ ನಡೆಸುತ್ತಿರುವ ಕಂಪನಿಗಳಿಂದ ಸರ್ಕಾರವು ಶೇಕಡಾ 2ರಷ್ಟು ಗಣಿ ನಿಧಿಯನ್ನು ಸಂಗ್ರಹಿಸಿ, ಈ ಹಣವನ್ನು ಗಣಿಬಾಧಿತ ಪ್ರದೇಶಗಳ ಪುನಃಶ್ಚೇತನಕ್ಕೆ ವೆಚ್ಚ ಮಾಡಲು ನಿರ್ಣಯಿಸಿದೆ. ರಾಜ್ಯದಲ್ಲಿ ಕಳೆದ 8–10 ವರ್ಷಗಳಲ್ಲಿ ಒಟ್ಟು ಸುಮಾರು 30,000 ಕೋಟಿ ರೂ.ಗಳ ಗಣಿನಿಧಿ ಹಣ ಸಂಗ್ರಹವಾಗಿದೆ. ಸಂಗ್ರಹವಾದ ಹಣವನ್ನು ಸರ್ಕಾರದ ಖಜಾನೆಗೆ ಜಮೆ ಮಾಡದೆ, ಗಣಿಬಾಧಿತ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಬಳಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು.

    ಗಣಿಗಾರಿಕೆಯಿಂದ ಪರಿಸರ ಹಾಗೂ ಗಣಿ ಪ್ರದೇಶದಲ್ಲಿ ವಾಸಿಸುವ ಜನಜೀವನದ ಮೇಲೆ ನಕಾರಾತ್ಮಕ ಪರಿಣಾಮಗಳು ಉಂಟಾಗಿರುವ ಹಿನ್ನೆಲೆಯಲ್ಲಿ, ಗಣಿನಿಧಿ ಮೊತ್ತವನ್ನು ಗಣಿಬಾಧಿತ ಪ್ರದೇಶಗಳಲ್ಲಿ ಪುನಶ್ಚೇತನ ಕಾರ್ಯಗಳಿಗೆ ಬಳಸುವ ತೀರ್ಮಾನ ಮಾಡಲಾಗಿದೆ ಎಂದರಲ್ಲದೆ ಜಿಲ್ಲೆಯ ಗಣಿಬಾಧಿತ ಗುಬ್ಬಿ, ತಿಪಟೂರು ಹಾಗೂ ಚಿಕ್ಕನಾಯಕನಹಳ್ಳಿ ತಾಲ್ಲೂಕುಗಳ ಅಭಿವೃದ್ಧಿಗಾಗಿ 2,300 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಲಾಗಿದೆ. ಗಣಿಬಾಧಿತ ತಾಲ್ಲೂಕುಗಳಲ್ಲಿ ಆಸ್ಪತ್ರೆ, ರಸ್ತೆ, ಶಾಲೆಗಳ ಅಭಿವೃದ್ಧಿಯೊಂದಿಗೆ 130 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಸ್ಪತ್ರೆಯ ಹಳೆ ಕಟ್ಟಡವನ್ನು ಕೆಡವಿ ಹೊಸ ಕಟ್ಟಡವನ್ನು ನಿರ್ಮಿಸಲು ಸರ್ಕಾರ ಅನುಮೋದನೆ ನೀಡಿದೆ ಎಂದು ತಿಳಿಸಿದರು.

    ಪರಿಸರ ಸಂರಕ್ಷಣೆಯ ಭಾಗವಾಗಿ ಗಿಡ ನೆಡುವ ಕೆಲಸಕ್ಕೂ ಈ ಹಣವನ್ನು ಬಳಸಲಾಗುವುದು. ಇದಲ್ಲದೆ, ಈ ಮೂರು ತಾಲೂಕುಗಳ ವ್ಯಾಪ್ತಿಯ ಪೊಲೀಸ್ ಠಾಣಾ ಕಟ್ಟಡಗಳ ನಿರ್ಮಾಣಕ್ಕಾಗಿ 12 ಕೋಟಿ ರೂ. ಅನುದಾನವನ್ನು ಈಗಾಗಲೇ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    “ಸಮಯೋಚಿತ ಕುಡಿಯುವ ನೀರು ಉಳಿಸಬಲ್ಲದು ಹಲವು ಮೂಕ ಪ್ರಾಣಿಗಳ ಜೀವ”

    June 19, 2025

    ನ್ಯಾಯಾಲಯದ ಗೇಟ್ ನಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು

    June 18, 2025

    ಜೆಡಿಎಸ್ — ಬಿಜೆಪಿ ನಡುವೆ ಹೊಂದಾಣಿಕೆ  ಕೊರತೆ: ಜೆಡಿಎಸ್  ಸಿಎಲ್‌ ಪಿ ನಾಯಕ ಸಿ.ಬಿ.ಸುರೇಶ್ ಬಾಬು

    June 18, 2025
    Our Picks

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಸಾಲ ಮರುಪಾವತಿಸಲಿಲ್ಲ ಎಂದು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ!

    June 17, 2025

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025

    ಸೇತುವೆ ಕುಸಿದು 6 ಮಂದಿ ಪ್ರವಾಸಿಗರು ಸಾವು

    June 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯಕ್ಕೆ ಜೋಶಿ, ಕುಮಾರಸ್ವಾಮಿ ಕೊಡುಗೆ ಏನು?: ಬಹಿರಂಗ ಚರ್ಚೆಗೆ ಪ್ರದೀಪ್ ಈಶ್ವರ್ ಸವಾಲು

    June 19, 2025

    ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹೆಚ್.ಡಿ ಕುಮಾರಸ್ವಾಮಿಯವರಿಂದ ರಾಜ್ಯಕ್ಕೆ ಕೊಡುಗೆ ಏನು ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್…

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಮೆಟ್ರೋ ನಿಲ್ದಾಣದ ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತವಿಲ್ಲ: BMRCL ಸ್ಪಷ್ಟನೆ

    June 19, 2025

    ಶೌಚಗುಂಡಿ ಗುಂಡಿಯಲ್ಲಿ ಪತ್ತೆಯಾಯ್ತು ಮಾನವನ ಅಸ್ಥಿಪಂಜರ!

    June 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.