ಇದೇ ಮೊದಲ ಬಾರಿಗೆ ತೃತೀಯ ಲಿಂಗಿಯೊಬ್ಬರು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ದಕ್ಷಿಣ ದೆಹಲಿ ಕ್ಷೇತ್ರದಿಂದ ರಾಜನ್ ಸಿಂಗ್(26) ಎಂಬ ತೃತೀಯಲಿಂಗಿಯೊಬ್ಬರು ನಾಮಪತ್ರ ಸಲ್ಲಿಸಿದ್ದಾರೆ. ಧೋತಿ, ಕ್ಯಾಪ್ ಮತ್ತು ಚಿನ್ನದ ಆಭರಣಗಳನ್ನು ಧರಿಸಿ, ಏಕಾಂಗಿಯಾಗಿ ಸಾಕೇತ್ ನಲ್ಲಿರುವ ದಕ್ಷಿಣ ದೆಹಲಿಯ ಚುನಾವಣಾಧಿಕಾರಿಯ ಕಚೇರಿಗೆ ತೆರಳಿ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ತೃತೀಯಲಿಂಗಿಗಳಿಗೆ ಪ್ರತ್ಯೇಕ ನಾಗರಿಕ ಸೌಲಭ್ಯಗಳ ಕೊರತೆಯಿಂದಾಗಿ ಮತ್ತು ಅವರ ಸಾಮಾಜಿಕ ಸ್ಥಿತಿಗತಿ ಮತ್ತು ಹಕ್ಕುಗಳಿಗಾಗಿ, ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಜನರು ಮತ್ತು ಅಧಿಕಾರಿಗಳ ಗಮನ ಸೆಳೆಯಲು, ನಾನು ಈ ಸ್ಪರ್ಧಿಸುತ್ತಿದ್ದೇನೆ ಎಂದು ತಿಳಿಸಿದರು.
ಚುನಾವಣೆಯಲ್ಲಿ ಸರ್ಕಾರವು ರಾಷ್ಟ್ರೀಯ ತೃತೀಯ ಲಿಂಗಿಗಳ ಆಯೋಗವನ್ನು ಸ್ಥಾಪಿಸಬೇಕೆಂದು ನಾನು ಬಯಸುತ್ತೇನೆ. ಇದರಿಂದಾಗಿ ನಮ್ಮ ಮೂಲಭೂತ ಅಗತ್ಯಗಳು, ಉದ್ಯೋಗ ಮತ್ತು ಶಿಕ್ಷಣದಲ್ಲಿ ಕನಿಷ್ಠ 1% ಮೀಸಲಾತಿಯನ್ನಾದರೂ ಜಾರಿಗೆ ತರಬಹುದು. ನಾನು ಗೆದ್ದರೆ, ತೃತೀಯ ಲಿಂಗಿಗಳ ಮೂಲಭೂತ ಅಗತ್ಯಗಳನ್ನು ಪೂರೈಸುವ ಕೆಲಸ ಮಾಡುತ್ತೇನೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296