nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!

    September 7, 2026
    Facebook Twitter Instagram
    ಟ್ರೆಂಡಿಂಗ್
    • ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!
    • ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ
    • ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    • ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!
    • ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನರಿಗೆ ಶುದ್ಧ ಕುಡಿಯುವ ನೀರು ನೀಡುವ ಯೋಗ್ಯತೆ ಈ ಸರ್ಕಾರಕ್ಕಿಲ್ಲ: ಆರ್.ಅಶೋಕ್ ಆಕ್ರೋಶ
    ರಾಜ್ಯ ಸುದ್ದಿ June 16, 2024

    ಜನರಿಗೆ ಶುದ್ಧ ಕುಡಿಯುವ ನೀರು ನೀಡುವ ಯೋಗ್ಯತೆ ಈ ಸರ್ಕಾರಕ್ಕಿಲ್ಲ: ಆರ್.ಅಶೋಕ್ ಆಕ್ರೋಶ

    By adminJune 16, 2024No Comments1 Min Read
    r ashok

    ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರದಲ್ಲೇ ಜನರು ಕಲುಷಿತ ನೀರು ಕುಡಿದು ಮೃತಪಟ್ಟಿದ್ದಾರೆ. ಟ್ಯಾಂಕರ್ ಗಳನ್ನು ಸ್ವಚ್ಛಗೊಳಿಸಲು ಸರಕಾರದ ಬಳಿ ಹಣವಿಲ್ಲ. ಜನರಿಗೆ ಶುದ್ಧ ಕುಡಿಯುವ ನೀರು ನೀಡುವ ಯೋಗ್ಯತೆ ಕೂಡ ಈ ಸರಕಾರಕ್ಕಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

    ಶನಿವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೂಗಿನಡಿ ಅವರ ಕ್ಷೇತ್ರ ವರುಣದಲ್ಲಿ ಕಲುಷಿತ ನೀರನ್ನು ಜನರು ಸೇವಿಸಿ ಸಾವಿಗೀಡಾಗಿದ್ದಾರೆ. ಅಂದರೆ ಮುಖ್ಯಮಂತ್ರಿಗಳಿಗೆ ಕುಡಿಯುವ ನೀರು ನೀಡುವ ಯೋಗ್ಯತೆ ಇಲ್ಲ ಎಂದು ಟೀಕಿಸಿದರು.

    ಈಗ ತುಮಕೂರಿನಲ್ಲೂ ಕಲುಷಿತ ನೀರು ಸೇವಿಸಿ ಆರು ಜನರ ಸಾವಾಗಿದೆ. ಇದಕ್ಕೆ ಜಿಲ್ಲಾಧಿಕಾರಿಯನ್ನು ಕೇಳಿದರೆ ಮೂತ್ರಪಿಂಡ ಸಮಸ್ಯೆ ಎನ್ನುತ್ತಾರೆ. ಆರೋಗ್ಯ ಸಮಸ್ಯೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಅದನ್ನೆ ಸಬೂಬು ಮಾಡಬಾರದು. ಈ ಕುರಿತು ವರದಿ ಕೇಳಿದ್ದೇನೆ. ಕೊಪ್ಪಳದಲ್ಲಿಯೂ ಜನರು ಕಲುಷಿತ ನೀರು ಸೇವಿಸಿ ಆಸ್ಪತ್ರೆ ಸೇರಿದ್ದಾರೆ. ಶಾಸಕರು ಅನುದಾನ ಕೇಳಿದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಯಿ ಮುಚ್ಚಿಕೊಂಡು ಸುಮ್ಮನಿರಿ ಎಂದಿದ್ದಾರೆ. ಜನರ ಸಾವಿಗೆ ಸರಕಾರದ ನಿರ್ಲಕ್ಷ್ಯವೇ ನೇರ ಕಾರಣ ಎಂದು ಅವರು ಕಿಡಿಕಾರಿದರು.

    ಟ್ಯಾಂಕರ್ ಮಾಫಿಯಾ: ಎಟಿಎಂ ಕಾಂಗ್ರೆಸ್ ಸರಕಾರ ಹೈಕಮಾಂಡ್ ಗೆ ಹಣ ಕಳುಹಿಸಲು ಟ್ಯಾಂಕರ್ ಮಾಫಿಯಾವನ್ನು ಬಳಸಿಕೊಂಡಿದೆ. ಕಾಂಗ್ರೆಸ್ ಸರಕಾರ ಗ್ರಾಮೀಣಾಭಿವೃದ್ಧಿ ಇಲಾಖೆಯ ಅನುದಾನದಲ್ಲಿ ಶೇ.25 ರಷ್ಟು ಕಡಿತ ಮಾಡಿ ಮೂಲಸೌಕರ್ಯ ಸಿಗದಂತೆ ಮಾಡಿದೆ. ಇದರ ಪ್ರತಿಫಲವಾಗಿ ಜನರಿಗೆ ಸರಿಯಾಗಿ ನೀರು ದೊರೆಯುತ್ತಿಲ್ಲ. ಸಿಎಂ ಸೂಚನೆಗೆ ಅಧಿಕಾರಿಗಳು ಬೆಲೆ ನೀಡದೆ ಕೈ ಚೆಲ್ಲಿದ್ದಾರೆ. ಗುತ್ತಿಗೆದಾರರು ಕೆಲಸ ಮಾಡುತ್ತಿಲ್ಲ ಎಂದು ಅಶೋಕ್ ದೂರಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026

    ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ

    September 7, 2026

    ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್

    September 6, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ತುಮಕೂರು: ತಾಲ್ಲೂಕಿನ ಹಿರೇಹಳ್ಳಿ ಕೆರೆಯ ಒತ್ತುವರಿಯನ್ನು ತಕ್ಷಣವೇ ತೆರವುಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರು…

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!

    September 7, 2026

    ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.