ತುರುವೇಕೆರೆ: ತಾಲೂಕಿನ ಕಸಬಾ ಹೋಬಳಿಯ ಪುರ ಗ್ರಾಮದ ಬಳಿ ಇರುವ ತೊರೆಯಲ್ಲಿ ಹಸುವಿನ ಮೈತೊಳೆಯಲು ಹೋಗಿದ್ದ ಪುರ ಗ್ರಾಮದ ರೈತ ಗೋವಿಂದಯ್ಯ ಬಿನ್ ಮೂಡಲಗಿರಿ ಸುಮಾರು 50 ವರ್ಷ ವಯಸ್ಸಿನ ವ್ಯಕ್ತಿಯು ಆಕಸ್ಮಿಕವಾಗಿ ಕಾಲು ಜಾರಿ ತೊರೆಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಘಟನಾ ಸ್ಥಳಕ್ಕೆ ಕುಣಿಗಲ್ ಉಪ ವಿಭಾಗದ ಡಿವೈಎಸ್ಪಿ ಲಕ್ಷ್ಮಿಕಾಂತ್, ತುರುವೇಕೆರೆ ಪೊಲೀಸ್ ಉಪ ನಿರೀಕ್ಷಕ ಕೆ.ಗಣೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಮೃತದೇಹವನ್ನು ನೀರಿನಿಂದ ಹೊರಕ್ಕೆತ್ತಿದ್ದು, ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ತರಲಾಗಿದೆ , ಮೃತ ವ್ಯಕ್ತಿಯ ಕುಟುಂಬದವರ ಹಾಗೂ ಆಕ್ರಂದನ ಮುಗಿಲು ಮುಟ್ಟಿತ್ತು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/F93PYUrewdsCfgROQBejv5
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ: https://www.youtube.com/channel/UCtrQuDOToxHu8dzMaHjoYXA