ಶೋಕಿ ಜೀವನಕ್ಕೆ ಬೈಕ್ ಕಳ್ಳತನವನ್ನೇ ಕಾಯಕ ಮಾಡಿಕೊಂಡ ನಾಲ್ವರು ಖತರ್ನಾಕ್ ಖದೀಮರನ್ನು ಜಗಜೀವನರಾಮನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತೌಫಿಕ್ ಪಾಷ ಅಲಿಯಾಸ್ ತೋತಾಪುರಿ(22), ಅಮೀನ್ ಪಾಷ ಅಲಿಯಾಸ್ ಆಫ್ಜಲ್ ಪಾಷ(22) ಅಫ್ರೀದ್ ಖಾನ್(26),ಸಲ್ಮಾನ್ ಅಲಿಯಾಸ್ ಎಳನೀರು (22) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
ಬಂಧಿತರಿಂದ 6.80 ಲಕ್ಷ ಮೌಲ್ಯದ 16 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.
ಅಪರಾಧ ಪ್ರಕರಣಗಳಲ್ಲಿ ಜೈಲು ಸೇರಿದ್ದ ಆರೋಪಿಗಳು ಕಳೆದ ನಾಲ್ಕು ತಿಂಗಳ ಹಿಂದಷ್ಟೆ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದು ಮತ್ತೆ ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದರು.
ಕಳೆದ ಜೂ.14 ರಂದು ರಾತ್ರಿ 11:30ರ ವೇಳೆ ಜಗಜೀವನರಾಮನಗರದ ಮನೆಯೊಂದರ ಬಳಿ ನಿಲ್ಲಿಸಿದ್ದ ಸುಜುಕಿ ಆಕ್ಸೆಸ್
ಸ್ಕೂಟರ್ ನ್ನು ಕಳವು ಮಾಡಿದ ಪ್ರಕರಣವನ್ನು ದಾಖಲಿಸಿ ಕಾರ್ಯಾಚರಣೆ ಕೈಗೊಂಡ ಜೆ.ಜೆ.ನಗರ ಪೊಲೀಸ್ ಇನ್ಸ್‌ಪೆಕ್ಟರ್ ಡಿ.ಸಿ. ಮಂಜು ಮತ್ತವರ ಸಿಬ್ಬಂದಿ ಜೂ.18 ರಂದು ಓರ್ವ ನನ್ನು ಬಂಧಿಸಲಾಗಿತ್ತು.
ಆರೋಪಿಯು ನೀಡಿದ ಸುಳಿವಿನ ಮೇರೆಗೆ ತಲೆಮರೆಸಿಕೊಂಡಿದ್ದ ಇನ್ನೂ ಮೂರು ಜನ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ. ಆರೋಪಿಗಳು ಜೆ.ಜೆ. ನಗರ, ವಿಜಯನಗರ, ಸಂಪಿಗೆ ಹಳ್ಳಿ, ಬಸವನಗುಡಿ, ಕೆಂಪೇಗೌಡ ನಗರ, ಚನ್ನಮ್ಮನಕೆರೆ ಅಚ್ಚುಕಟ್ಟು,ಸಿದ್ದಾಪುರ ಹಾಗೂ ಕುಂಬಳಗೋಡು ಪೊಲೀಸ್ ಠಾಣಾ ಸರಹದ್ದಿನಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುವುದನ್ನು ಬಾಯ್ಬಿಟ್ಟಿದ್ದಾರೆ ಎಂದು ತಿಳಿಸಿದರು.
ವರದಿ: ಆಂಟೋನಿ, ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


