nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತೋವಿನಕೆರೆಯಲ್ಲಿ ಕೆ.ಎಂ.ಮುನಿಯಪ್ಪ ಅಭಿಮಾನಿ ಗೆಳೆಯರ ಬಳಗದ ಕಚೇರಿ ಉದ್ಘಾಟನೆ
    ಕೊರಟಗೆರೆ October 6, 2022

    ತೋವಿನಕೆರೆಯಲ್ಲಿ ಕೆ.ಎಂ.ಮುನಿಯಪ್ಪ ಅಭಿಮಾನಿ ಗೆಳೆಯರ ಬಳಗದ ಕಚೇರಿ ಉದ್ಘಾಟನೆ

    By adminOctober 6, 2022No Comments2 Mins Read
    km muniyappa

    ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ತೋವಿನಕೆರೆ ಪಟ್ಟಣದಲ್ಲಿ ಸಮಾಜ ಸೇವಕ ಹಾಗೂ ಕೊರಟಗೆರೆ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸಂಭಾವ್ಯ ಅಭ್ಯರ್ಥಿಯಾದ ಕೆ.ಎಂ.ಮುನಿಯಪ್ಪನವರು ಸ್ಪರ್ಧಿಸಲಿದ್ದು, ತಮ್ಮ ಅಭಿಮಾನಿ ಗೆಳೆಯರ ಬಳಗದ ಹೋಬಳಿ ಮಟ್ಟದ ಕಚೇರಿಯನ್ನು ಉದ್ಘಾಟನೆ ಮಾಡಿದರು.

    ಕಳೆದ ಮೂರ್ನಾಲ್ಕು ವರ್ಷಗಳಿಂದ ಕ್ಷೇತ್ರದಲ್ಲಿ ನಿರ್ಗತಿಕರ, ಬಡವರ, ರೈತರ ಪಾಲಿಗೆ ಕಾಮಧೇನುವಾಗಿ ನಿಷ್ಕಲ್ಮಶವಾದ ಮನಸ್ಸಿನಿಂದ ಕೆಲಸ ಮಾಡುತ್ತಿರುವ ಬಿಜೆಪಿ ಪಕ್ಷದ ಮುಖಂಡ ಕೆ.ಎಂ.ಮುನಿಯಪ್ಪ, ಬಿಜೆಪಿ ಪಕ್ಷದ ಸಂಘಟನೆ ಮಾಡಲು ಪಕ್ಷವನ್ನು ಇನ್ನಷ್ಟು ಬಲಿಷ್ಠ ಗೊಳಿಸಲು ಮತ್ತು ಅಭಿಮಾನಿ ಗೆಳೆಯರ ಬಳಗದ ಕಚೇರಿ ವತಿಯಿಂದ ರೈತರಿಗೆ ಅನುಕೂಲವಾಗುವಂತೆ ಮಿನಿ ಸೇವಾ ಕೇಂದ್ರವನ್ನು ತೆರೆಯುವುದರ ಮೂಲಕ ಬಡವರಿಗೆ ರೈತರಿಗೆ, ನಿರಾಶ್ರಿತರಿಗೆ ಹತ್ತಿರವಾಗುತ್ತಿದ್ದಾರೆ.


    Provided by
    Provided by

    ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಹೋಬಳಿ ಮಟ್ಟದಲ್ಲಿ ಕಚೇರಿ ಸ್ಥಾಪನೆ ಮಾಡಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪಹಣಿ, ಎಮ್.ಆರ್., ಇ ಶ್ರಮ್ ಕಾರ್ಡ್, ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಮತ್ತು ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ನೀಡಿ ಜನರ ಕಷ್ಟ ಸುಖಗಳಿಗೆ ಮತ್ತು ಜನರ ಕುಂದು- ಕೊರತೆಗಳನ್ನು ಬಗೆಹರಿಸಲು ಶ್ರಮಜೀವಿಯಾಗಿ ಕ್ಷೇತ್ರದಲ್ಲಿ ಶ್ರಮಿಸುತ್ತಿದ್ದಾರೆ.

    ಇದೇ ಸಂದರ್ಭದಲ್ಲಿ ವಿಜಯದಶಮಿ ಹಬ್ಬದ ಪ್ರಯುಕ್ತ ಸುಮಾರು 500ಕ್ಕೂ ಹೆಚ್ಚು ಮಹಿಳೆಯರಿಗೆ ಹರಿಶಿಣ-ಕುಂಕುಮ ನೀಡುವುದರ ಜೊತೆಗೆ ಸೀರೆಯನ್ನು ವಿತರಣೆ ಮಾಡಲಾಯಿತು.

    ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಮಾಜಸೇವಕ ಬಿಜೆಪಿ ಪಕ್ಷದ ಸಂಭಾವ್ಯ ಅಭ್ಯರ್ಥಿಯಾದ ಕೆ.ಎಂ.ಮುನಿಯಪ್ಪ , ನಿರ್ಗತಿಕರ, ವೃದ್ಧರ, ರೈತರ ಮತ್ತು ಬಡವರ ಪರ ಕೆಲಸ ಮಾಡುವ ಉದ್ದೇಶವನ್ನು ನಾನು ಹೊಂದಿದ್ದು, ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಸೇವೆ ಮಾಡುವ ಕನಸು ಕಂಡಿದ್ದು, ನಾನು ನನ್ನ ಜನರಿಗೆ ನಿರಂತರವಾದ ಸಹಾಯ ಮಾಡುತ್ತೇನೆ. ಮುನಿಯಪ್ಪ ಅಭಿಮಾನಿ ಗೆಳೆಯರ ಬಳಗದ ಕಚೇರಿ ವತಿಯಿಂದ ರೈತರಿಗೆ ನೂರಾರು ರೀತಿಯ ಅನುಕೂಲವಾಗುವುದು ಮತ್ತು ಸಾರ್ವಜನಿಕರ ಕಷ್ಟ-ಸುಖಗಳ, ಕುಂದು-ಕೊರತೆಗೆ ಸ್ಪಂದಿಸುವ ನಿಟ್ಟಿನಲ್ಲಿ ಈ ಕಚೇರಿ ಕೆಲಸ ಮಾಡುತ್ತದೆ ಎಂದರು.

    ಈ ಸಂದರ್ಭದಲ್ಲಿ ತೋವಿನಕೆರೆ ಮುನಿಯಪ್ಪ ಗೆಳೆಯರ ಬಳಗದ ಅಭಿಮಾನಿಗಳಾದ ಮಂಜುನಾಥ್, ನಾಗರಾಜು, ಮೀಸೆ ಮಂಜುನಾಥ್, ವಕೀಲರದ ನಾಗರಾಜು, ವಸಂತ್ ಕುಮಾರ್, ಗಿರೀಶ್, ಕಿರಣ್ ಬಿ.ಟಿ.ಗಿರೀಶ್ ಮತ್ತು ಬಿಜೆಪಿ ಪಕ್ಷದ ಮುಖಂಡರುಗಳಾದ ಗೋವಿಂದ ರೆಡ್ಡಿ, ಕೆಂಪರಾಜು, ಮಂಜಣ್ಣ, ವೀರೇಶ್, ಆನಂದ್, ಹನುಮೇಶ್, ನರಸಿಂಹಮೂರ್ತಿ, ಕಾರ್ತಿಕ್, ವೆಂಕಟೇಶ್, ಶ್ರೀನಿವಾಸ್, ಸಿದ್ದರಾಜು ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಮಹಿಳೆಯರು ಹಾಗೂ ಸಾರ್ವಜನಿಕರು ಹಾಜರಿದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.…

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.