ಮೊಬೈಲ್ ನಂಬರ್ ಕೊಡಲಿಲ್ಲವೆಂಬ ಕಾರಣಕ್ಕೆ ಮಹಿಳೆಯೊಬ್ಬರ ಕಾರಿನ ಗಾಜು ಒಡೆದು ಬೆದರಿಕೆಯೊಡ್ಡಲಾಗಿದ್ದು, ಈ ಸಂಬಂಧ ಪೀಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳೀಯ ನಿವಾಸಿಯಾಗಿರುವ ಮಹಿಳೆ, ಕಂಪನಿಯೊಂದರ ಉದ್ಯೋಗಿ, ಶನಿವಾರ ರಾತ್ರಿ ನಡೆದಿರುವ ಘಟನೆ ಸಂಬಂಧ ದೂರು ಪಡೆದು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ಮೊಬೈಲ್ ನಂಬರ್ ವಿಚಾರವಾಗಿ ಮಹಿಳೆ ಹಾಗೂ ಪಕ್ಕದ ಮನೆಯವರ ನಡುವೆ ಜಗಳ ಶುರುವಾಗಿತ್ತು. ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಆರೋಪಿ, ಕಾರಿನ ಗಾಜು ಒಡೆದು ಬೆದರಿಕೆ ಹಾಕಿರುವುದಾಗಿ ಗೊತ್ತಾಗಿದೆ. ಘಟನೆಗೆ ಪ್ರಮುಖ ಕಾರಣವೇನು ಎಂಬುಂದು ತನಿಖೆಯಿಂದ ತಿಳಿಯಬೇಕಿದೆ’ ಎಂದು ತಿಳಿಸಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


