ಕ್ರಿಸ್ ಮಸ್ ಟ್ರಿ ಪ್ರದರ್ಶನ ಹಾಗೂ ಟಿಕೆಟ್ ನಿಗದಿಪಡಿಸಿರುವುದನ್ನು ವಿರೋಧಿಸಿ ಮಾಲ್ ಸಿಬ್ಬಂದಿಗೆ ತೊಂದರೆ ಹಾಗೂ ಬೆದರಿಕೆ ಹಾಕಿರುವ ಆರೋಪದಡಿ ಸಂಘಪರಿವಾರದ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ಅವರ ನಾಲ್ವರು ಬೆಂಬಲಿಗರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬ್ಯಾಟರಾಯನಪುರದ ಮಾಲ್ ಆಫ್ ಏಷ್ಯಾದ ಸೆಕ್ಯೂರಿಟಿ ಅಸಿಸ್ಟೆಂಟ್ ಮ್ಯಾನೇಜರ್ ಸ್ಟೀಫನ್ ವಿಕ್ಟರ್ ಎಂಬುವರು ನೀಡಿರುವ ದೂರಿನನ್ವಯ ಇಲ್ಲಿನ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.


