ರಾಮನಗರ: ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನೀರಿನ ಹೊಂಡದಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಮೃತ ಮಕ್ಕಳನ್ನು ಶಾಬಾಜ್ (14) ಸುಲ್ತಾನ್ (13) ರಿಹಾನ್ ಖಾನ್ (16) ಎಂದು ಗುರುತಿಸಲಾಗಿದೆ.
ಮೃತರೆಲ್ಲರೂ ರಾಮನಗರ ಟೌನ್ ನ ಸುಲ್ತಾನ್ ನಗರದವರಾಗಿದ್ದಾರೆ. ಎಂಟು ಬಾಲಕರು ನಮಾಜ್ ಮುಗಿಸಿ ಈಜಲು ಹೋಗಿದ್ದು, ಈ ಪೈಕಿ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ಮೃತದೇಹಗಳನ್ನು ಹೊರತೆಗೆದಿದ್ದಾರೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296