ವಾಷಿಂಗ್ಟನ್: ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮೂವರು ಭಾರತೀಯ ಮೂಲದ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಆಲ್ಫರೆಟ್ಟಾ ಹೈಸ್ಕೂಲ್ ಮತ್ತು ಜಾರ್ಜಿಯಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದರು. ಎಲ್ಲಾ ಐವರು ವಿದ್ಯಾರ್ಥಿಗಳೂ 18 ವರ್ಷ ವಯಸ್ಸಿನವರಾಗಿದ್ದಾರೆ. ಮೃತ ವಿದ್ಯಾರ್ಥಿಗಳು ಕಾರನ್ನು ವೇಗವಾಗಿ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ನಂತರ ವೇಗವಾಗಿ ಬಂದ ವಾಹನವು ಪಲ್ಟಿಯಾಗಿ ಬಿದ್ದಿದೆ. ಆರ್ಯನ್ ಜೋಶಿ ಮತ್ತು ಶ್ರೀಯಾ ಅವಸರಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅನ್ವಿ ಶರ್ಮಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296