ನೆಲಮಂಗಲ: ಕುರಿ, ಮೇಕೆ ತುಂಬಿದ್ದ ಲಾರಿಗೆ KSRTC ಬಸ್ ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಬಳಿ ಇಂದು ಬೆಳಗ್ಗಿನ ಜಾವ 3.30 ಸಮಯದಲ್ಲಿ ಸಂಭವಿಸಿದೆ.
ಭೀಕರ ರಸ್ತೆ ಅಪಘಾತದಲ್ಲಿ ಲಾರಿಯಲ್ಲಿದ್ದ ಸೀನಪ್ಪ(50), ನಜೀರ್ ಅಹ್ಮದ್(36), ಆನಂದ್(42) ಮೃತರಾಗಿದ್ದಾರೆ.
ಕುರಿ, ಮೇಕೆ ತುಂಬಿಕೊಂಡು ಮುಧೋಳದಿಂದ ತುಮಕೂರು ಮಾರ್ಗವಾಗಿ ಬೆಂಗಳೂರು ಕಡೆಗೆ ಲಾರಿ ತೆರಳುತ್ತಿತ್ತು. ಟೈಯರ್ ಪಂಚರ್ ಆಗಿದ್ದರಿಂದ ಲಾರಿಯನ್ನು ರಸ್ತೆ ಬದಿ ನಿಲ್ಲಿಸಲಾಗಿತ್ತು. ಈ ವೇಳೆ ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಲಾರಿ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC