ತುಮಕೂರು: ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪುರವರ ಹೋಬಳಿಯ ಗುಡ್ಡೇನಹಳ್ಳಿ ಬಳಿ ಇಂದು ಮುಂಜಾನೆ ನಡೆದಿದೆ.
ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಮೃತಪಟ್ಟವರನ್ನು ಮಹಮದ್ ಆಸೀಫ್ (12), ಮಮ್ತಾಝ್ (38), ಶಾಖೀರ್ ಹುಸೇನ್ (48) ಎಂದು ಗುರುತಿಸಲಾಗಿದೆ.
ಬೈಕ್ ನಲ್ಲಿ ತೆರಳುತಿದ್ದ ಮೂವರಿಗೆ ಹಿಂಬದಿಯಿಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ, ಇದರ ಪರಿಣಾಮ ಸ್ಥಳದಲ್ಲಿಯೇ ಮೂವರು ಅಸುನೀಗಿದ್ದಾರೆ.
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಧುಗಿರಿ ತಾಲೂಕಿನ ಕೊರಟಗೆರೆ ರಸ್ತೆ ಓಬಳಾಪುರ ಗೇಟ್ ಬಳಿ ಘಟನೆ ಸಂಭವಿಸಿದೆ.
ಮೃತಪಟ್ಟ ಮೂವರು ಕೂಡ ಮಧುಗಿರಿ ತಾಲೂಕಿನವರೆಂದು ಈಗಾಗಲೇ ಪತ್ತೆ ಹೆಚ್ಚಲಾಗಿದೆ. ಈ ಸಂಬಂಧ ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx