ಮಂಗಳೂರು: ಮಂಗಳೂರಿನ ಹೊರವಲಯದ ಕೋಟೆಕಾರು ಸಹಕಾರಿ ಬ್ಯಾಂಕಿಂದ 12 ಕೋಟಿ ರು. ಮೌಲ್ಯದ ಚಿನ್ನಾಭರಣ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಧಾರಾವಿ ಗ್ಯಾಂಗ್ ಗೆ ಸೇರಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ಮಧುರೈನಲ್ಲಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಬಂಧಿತರಿಂದ ಫಿಯೆಟ್ ಕಾರು, ಎರಡು ಗೋಣಿಚೀಲದಲ್ಲಿದ್ದ ಚಿನ್ನ, ತಲ್ವಾರ್, 2 ಪಿಸ್ತೂಲ್ ಹಾಗೂ ಇತರ ಸತ್ತು ಜಪ್ತಿ ಮಾಡಿದ್ದಾರೆ.
ಬಂಧಿತರನ್ನು ಪ್ರಕರಣದ ಕಿಂಗ್ಪಿನ್ ಮುರುಗಂಡಿ ತೇವರ್ (36), ರಾಜೇಂದ್ರನ್ (35) ಹಾಗೂ ಕಣ್ಣನ್ ಮಣಿ (36) ಎಂದು ಗುರುತಿಸಲಾಗಿದೆ.
ದರೋಡೆಗೆಂದೇ ಮಂಗಳೂರಿಗೆ ಬಂದಿದ್ದ ಆರೋಪಿಗಳು, ದರೋಡೆ ನಂತರ ಕೇರಳ ಮೂಲಕ ತಮಿಳುನಾಡಿಗೆ ಪರಾರಿಯಾಗಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx