ಕಾರವಾರ: ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಪತಿ, ಪತ್ನಿ ಹಾಗೂ ಏಳು ತಿಂಗಳು ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಬುಧವಾರ ನಡೆದಿದೆ.
ಕೊಪ್ಪಳದ ಆರ್.ವೆಂಕಟೇಶ್, ಅವರ ಪತ್ನಿ ಚೈತ್ರಾ ಹಾಗೂ ಅವರ 7 ತಿಂಗಳ ಮಗು ಶ್ರೀಹಾನ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೃತ ವೆಂಕಟೇಶ ಅವರ ಸಹೋದರ ಶ್ರೀಕಾಂತ ರೆಡ್ಡಿ ಅವರಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರವಾಸಕ್ಕೆಂದು ಕೊಪ್ಪಳದಿಂದ ಅಂಕೋಲಾ ಕಡೆಗೆ ಕಾರಿನಲ್ಲಿ ಹೊರಟಿದ್ದ ಇಡೀ ಕುಟುಂಬ ದುರಂತ ಅಂತ್ಯಕಂಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4