ಬೆಂಗಳೂರು: ನಾಮಕರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲೆಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತಕ್ಕೆ ಬಲಿಯಾಗಿರುವ ಘಟನೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಲ್ಲೇಶ್ವರಂದ ನಿವಾಸಿಗಳಾದ ಗೋಪಾಲ(60), ಇವರ ಪತ್ನಿ ಶಶಿಕಲಾ(54) ಮತ್ತು ಇವರ ಮಗಳು ದೀಪಾ(25) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೂವರೆ ವರ್ಷದ ಹಾಗೂ 5 ವರ್ಷದ ಮಕ್ಕಳು ಆಶ್ಚರ್ಯಕರ ಸ್ಥಿತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗೋಪಾಲ ಅವರು ಇಂದು ಬೆಳಗ್ಗೆ ಪತ್ನಿ, ಮಗಳು, ಹಾಗೂ ಇಬ್ಬರು ಮೊಮಕ್ಕಳ ಜೊತೆ ಮಲ್ಲೇಶ್ವರಂ ನಿಂದ ಹಿರಿಯೂರಿಗೆ ನಾಮಕರಣ ಕಾರ್ಯಕ್ರಮದ ನಿಮಿತ್ತ ಹೋಗುತ್ತಿದ್ದರು. 10.30ರ ಸುಮಾರಿಗೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಬೆಂಗಳೂರು-ತುಮಕೂರು ರಸ್ತೆಯಲ್ಲಿ ಹೋಗುತ್ತಿದ್ದಾಗ, ಅಂಚೆ ಮನೆ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಎಡ ಭಾಗದ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————