ಲಕ್ನೋ: ಕಾರು ಕಾಲುವೆಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಎಂಟು ಮಂದಿಯ ಪೈಕಿ ಮೂವರು ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆಯಲ್ಲಿ, ಕಾರಿನಲ್ಲಿದ್ದ ಐವರನ್ನು ಕಾಲುವೆಯಿಂದ ಮೇಲೆತ್ತಲಾಗಿದ್ದು, ಅದರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತಪಟ್ಟ ಮೂವರು 18-22 ವರ್ಷದೊಳಗಿನವರಾಗಿದ್ದು, ಒಡಹುಟ್ಟಿದವರು ಎಂದು ತಿಳಿದುಬಂದಿದೆ. ಇನ್ನೂ ಇಬ್ಬರು ಗಾಯಗೊಂಡಿದ್ದಾರೆ. ಇಬ್ಬರು ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.
ಇನ್ನು ಘಟನೆಯಲ್ಲಿ ಐದು ವರ್ಷದ ಮಗು ಹಾಗೂ ಇಬ್ಬರು ಪುರುಷರು ನಾಪತ್ತೆಯಾಗಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡವು ಘಟನಾ ಸ್ಥಳಕ್ಕೆ ತೆರಳಿದ್ದು, ನಾಪತ್ತೆಯಾಗಿರುವ ಮೂವರಿಗಾಗಿ ಶೋಧ ಕಾರ್ಯ ನಡೆಸುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


