ಚಿಕ್ಕಬಳ್ಳಾಪುರ: ಶ್ರೀನಿವಾಸ ಸಾಗರ ಜಲಾಶಯದ ನೀರಿನಲ್ಲಿ ಮುಳುಗಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಬೆಂಗಳೂರು ಮೂಲದ ಬಶೀರ್ (43), ಪರ್ಹಿನ್ (45) ಹಾಗೂ ಇಮ್ರಾನ್ (45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಜಲಾಶಯ ನೋಡಲೆಂದು ಆಗಮಿಸಿದ್ದರು ಎಂದು ತಿಳಿದು ಬಂದಿದೆ.
ರಂಜಾನ್ ಹಬ್ಬದ ನಂತರ ಕುಟುಂಬ ಸಮೇತರಾಗಿ ತಾಲೂಕಿನ ವಿವಿಧ ಕಡೆ ಪ್ರವಾಸಕ್ಕೆಂದು ಆಗಮಿಸಿದ್ದರು. ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯ ನೋಡಲೆಂದು ಆಗಮಿಸಿದ್ದ ವೇಳೆ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4