ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, 15ಕ್ಕೂ ಹೆಚ್ಚು ಜನ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕರ್ನಾಟಕದಿಂದ ಕುಂಭ ಮೇಳಕ್ಕೆ ತೆರಳಿದ್ದ ಬೆಳಗಾವಿಯ ತಾಯಿ, ಮಗಳು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.
ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ(50) ಮತ್ತು ಅವರ ಮಗಳು ಮೇಘಾ(18) ಹತ್ತರವಾಠ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬೆಳಗಾವಿಯ ಮತ್ತೋರ್ವ ವ್ಯಕ್ತಿ ಶೆಟ್ಟಿಗಲ್ಲಿಯ ಅರುಣ್ ಕೋಪರ್ಡೆ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದ ಪವಿತ್ರ ಸ್ನಾನದಲ್ಲಿ ಪಾಲ್ಕೊಳ್ಳಲೆಂದು ಕರ್ನಾಟದ ಬೆಳಗಾವಿಯಿಂದ ಸುಮಾರು 60 ಜನರ ತಂಡ ಎರಡು ಬಸ್ಗಳಲ್ಲಿ ತೆರಳಿದ್ದರು. ಇದರಲ್ಲಿ ನಮ್ಮ ಜೊತೆಗೆ 9 ಜನರು ಇದ್ದರು. ಅದರಲ್ಲಿ ನಾಲ್ಕೈದು ಜನ ಕಾಣಿಸುತ್ತಿಲ್ಲ ಎಂದು ಸ್ಥಳದಲ್ಲಿದ್ದ ಮಹಿಳೆಯೊಬ್ಬರು ಪ್ರತಿಕ್ರಿಯೆ ನೀಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4