ತುಮಕೂರು: ಖಾಸಗಿ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ವಡ್ಡರಹಳ್ಳಿ ಬಳಿ ಇಂದು ಬೆಳಿಗ್ಗೆ ನಡೆದಿದೆ.
ಬೆಂಗಳೂರಿನ ಶಿವಾಜಿನಗರದ ವಾಸಿಗಳಾದ ಅಕ್ಕಿರಾಮಪುರ ಸಂತೆಗೆ ಕುರಿ ಖರೀದಿ ಮಾಡಲು ಬಂದಿದ್ದರು. ಈ ವೇಳೆ ಎದುರಿಗೆ ಬಂದಂತಹ ಖಾಸಗಿ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ.
ಕಾರಿನಲ್ಲಿ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹೊರ ತೆಗೆಯಲು ಸ್ಥಳೀಯರು ಹರಸಾಹಸ ಪಟ್ಟರು.
ಕಾರಿನಲ್ಲಿ ಸಿಲುಕಿಕೊಂಡಿದ್ದವರನ್ನು ಹೊರತೆಗೆದು ಕೊರಟಗೆರೆ ತಾಲೂಕು, ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಈ ಸಂಬಂಧ ಕೋರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296