ಕಳೆದ 15 ದಿನಗಳಲ್ಲಿ 15 ಕೆರೆಗಳನ್ನು ಸಂಸ್ಕರಿಸಿದ ನೀರಿನಿಂದ ಭರ್ತಿ ಮಾಡಲಾಗಿದೆ. ಮುಂದಿನ ಒಂದು ವರ್ಷದಲ್ಲಿ 200 ಕೆರೆಗಳನ್ನು ತುಂಬಿಸುವ ಗುರಿ. ಹಾಕಿಕೊಂಡಿದ್ದು, ಇದಕ್ಕೆ ಜಲಮಿತ್ರರ ಸಹಕಾರ ಅಗತ್ಯವಾಗಿದೆ ಎಂದು ಜಲ ಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ಹೇಳಿದರು.
ಜಲಮಿತ್ರರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಜನನಿಬಿಡ ಪ್ರದೇಶಗಳಲ್ಲಿ 1500 ಸಿಂಟೆಕ್ಸ್ ಗಳನ್ನು ಅಳವಡಿಸಲಾಗಿದ್ದು, ಪ್ರತಿನಿತ್ಯ 3 ಬಾರಿ ಟ್ಯಾಂಕರ್ ಮೂಲಕ ನೀರು ತುಂಬಿಸಲಾಗುತ್ತಿದೆ ಎಂದರು.
ಬೆಂಗಳೂರು ನಗರದಲ್ಲಿ ಉದ್ಭವಿಸಿದ್ದ ನೀರಿನ ಸಮಸ್ಯೆಯನ್ನು ಕಳೆದ 45 ದಿನಗಳಲ್ಲಿ ಶೇ.80ರಷ್ಟು ಬಗೆಹರಿಸಲಾಗಿದೆ. ಸಮಸ್ಯೆಗಳಿರುವ ಪ್ರದೇಶಗಳಲ್ಲಿ ನೀರು ಸರಬರಾಜು ಮಾಡಲು ಜಲ ಮಂಡಳಿ ಕಾರ್ಯಪ್ರವೃತ್ತವಾಗಿದೆ ಎಂದು ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ.
ಜಲಮಿತ್ರರಿಗಾಗಿ ಮಂಡಳಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296