ತುಮಕೂರು: ಎನ್.ಹೆಚ್.ಎಂ. ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಮೂವರನ್ನು ಕರ್ತವ್ಯ ಲೋಪದ ಮೇಲೆ ಕರ್ತವ್ಯದಿಂದ ವಜಾಗೊಳಿಸಲಾಗಿದೆ.
ಮೂವರು ರೋಗಿಗಳಾದ ಅನಿತಾ, ಅಂಜಲಿ, ನರಸಮ್ಮ ಮೃತಪಟ್ಟಿದ್ದರು. ರೋಗಿಗಳ ಮರಣಕ್ಕೆ ಸಂಬಂಧಿಸಿದಂತೆ ದಿ:24-02-2024 ರಂದು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿಗಳು ತುಮಕೂರು ಮತ್ತು ತನಿಖಾ ತಂಡ ಇವರು ಇಲ್ಲಿ ಖುದ್ದು ಭೇಟಿ ನೀಡಿ ಪರಿಶೀಲಿಸಿದೆ. ಶಸ್ತ್ರಚಿಕಿತ್ಸೆ ಮಾಡಿಕೊಂಡ ರೋಗಿಗಳಲ್ಲಿ ಸೋಂಕು ಹರಡಿಡುವ ಚಿಹ್ನೆಗಳು ಕಂಡುಬಂದಿದ್ದು ಮತ್ತು ಶಸ್ತ್ರಚಿಕಿತ್ಸಾ ಪ್ರಕ್ರಿಯೆಯಲ್ಲಿ ಲೋಪಕಂಡುಬಂದಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ.
ಸಾಮಾನ್ಯವಾಗಿ ಈ ರೀತಿ ಸೋಂಕು ಶಸ್ತ್ರಚಿಕಿತ್ಸಾ ಕೊಠಡಿ ಧೂಮಿಕರಣ ಮಾಡದೇ ಇದ್ದಾಗ ಹಾಗೂ ಶಸ್ತ್ರಚಿಕಿತ್ಸಾ ಕೊಠಡಿಯ ಸಲಕರಣೆಗಳನ್ನು AUTO CLAVE ಮಾಡದೇ ಇದ್ದ ಸಂಧರ್ಬದಲ್ಲಿ ಈ ರೀತಿಯ ಸೋಂಕು ಹರಡುವ ಸಾಧ್ಯತೆ ಇದ್ದು, ಈ ಕಾರಣದಿಂದ ಮೂರು ಮರಣಕ್ಕೆ ಕಾರಣವಾಗಿರುವುದು ಕಂಡು ಬಂದಿರುತ್ತದೆ. ಆದ್ದರಿಂದ ಜಿಲ್ಲಾ ಆರೋಗ್ಯ ಸಂಘದ ಕರಾರು ಒಪ್ಪಂದದ ಪ್ರಕಾರ ಕರ್ತವ್ಯ ಲೋಪ ಹಾಗೂ ಕರ್ತವ್ಯ ನಿರ್ಲಕ್ಷತನ, ಬೇಜವಬ್ದಾರಿತನ ತೋರಿದ ಹಿನ್ನಲೆಯಲ್ಲಿ ಆದೇಶಿಸಿದೆ.
ಈ ಕೆಳಕಂಡ ಎನ್.ಹೆಚ್.ಎಂ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಈ ಕ್ಷಣದಿಂದಲೇ ಜಾರಿಗೆ ಬರುವಂತೆ ಜಿಲ್ಲಾ ಆರೋಗ್ಯ ಸಂಘದ ಕರಾರು ಒಪ್ಪಂದದ ಪ್ರಕಾರ ಕರ್ತವ್ಯ ಲೋಪ ಹಾಗೂ ಕರ್ತವ್ಯ ನಿರ್ಲಕ್ಷತನ, ಬೇಜವಬ್ದಾರಿತನ ತೋರಿದ ಹಿನ್ನಲೆಯಲ್ಲಿ 27/02/2024 ರಿಂದ ಅನ್ವಯವಾಗುವಂತೆ ಕರ್ತವ್ಯದಿಂದ ವಜಾಗೊಳಿಸಲಾಗಿದೆ. ಪದ್ಮಾವತಿ.ಜಿ ಶುಶೂಷಣಾಧಿಕಾರಿ, ಡಾ| ಪೂಜ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು ಸಾರ್ವಜನಿಕ ಆಸ್ಪತ್ರೆ ಪಾವಗಡ ತ। ತುಮಕೂರು ಜಿಲ್ಲೆ, ಕಿರಣ್ ವಜಾಗೊಂಡವರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


