ದೊಡ್ಡಬಳ್ಳಾಪುರ: ರೀಲ್ಸ್ ಮಾಡುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೊರವಲಯದ ಸಿದ್ದೇನಾಯಕನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ.
ಉತ್ತರ ಪ್ರದೇಶ ಮೂಲದ 18 ವರ್ಷದ ರಾಹುಲ್, 20 ವರ್ಷದ ಬಿಕೇಶ್ ಮತ್ತು 24 ವರ್ಷದ ಲಲನ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಮೂವರು ಯುವಕರು ಕಾರ್ಪೆಂಟರ್ ಕೆಲಸ ಮಾಡುತ್ತಿದ್ದರು. ಸಂಜೆ ಕೆಲಸ ಮುಗಿಸಿಕೊಂಡು ರೈಲ್ವೆ ಹಳಿ ಬಳಿ ಬಂದಿದ್ದರು. ರೀಲ್ಸ್ ಮಾಡುತ್ತಿದ್ದಾಗ ರೈಲು ಡಿಕ್ಕಿಯಾಗಿ ಯುವಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಯಶವಂತಪುರ ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4