ಸರಗೂರು: ವಿಶೇಷಚೇತನರ ತ್ರಿಚಕ್ರ ಬೈಕ್ ಸವಾರನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಬೈಕ್ ಸವಾರನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸರಗೂರು ತಾಲ್ಲೂಕಿನ ಶಾಂತಿನಿವಾಸ ಗ್ರಾಮದ ಬಳಿ ನಡೆದಿದೆ.
ಸರಗೂರು ತಾಲ್ಲೂಕಿನ ಕಲ್ಲಹಳ್ಳ ಹಾಡಿಯ ಕಾಳ ಅಲಿಯಾಸ್ ಅಪ್ಪಿ, ನಾಗಮ್ಮ, ವಿಜಯೇಂದ್ರ ಎಂಬುವವರು ತ್ರಿಚಕ್ರ ವಾಹನದಲ್ಲಿ ಸುಂಗೇವಾಡಿ ಹಾಡಿಯಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಮುಗಿಸಿ ತಮ್ಮ ಸ್ವಗ್ರಾಮಕ್ಕೆ ಮರಳುವ ವೇಳೆ ಈ ದುರ್ಘಟನೆ ನಡೆದಿದ್ದು, ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಹಿಂಬದಿ ಸವಾರರಾದ ನಾಗಮ್ಮ, ವಿಜಯೇಂದ್ರ ಎಂಬುವವರು ಮೃತಪಟ್ಟಿದ್ದು, ಬೈಕ್ ಸವಾರ ಕಾಳ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಹೆಚ್.ಡಿ.ಕೋಟೆ ಸಾರ್ವಜನಿಕರ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.
ಗಾಯಗೊಂಡಿದ್ದ ಕಾಳ ಎಂಬುವವರನ್ನು ವಿವೇಕಾನಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


