ಮಡಿಕೇರಿ: ಎರಡು ಜೀವಗಳನ್ನು ಬಲಿ ಪಡೆದಿದ್ದ ಪುಂಡಾನೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.
ಕಳೆದ ಕೆಲವು ವರ್ಷಗಳ ಹಿಂದೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಚೆನ್ನಂಗೊಲ್ಲಿ, ಭದ್ರಗೊಳ, ದೇವರಪುರ ವ್ಯಾಪ್ತಿಯಲ್ಲಿ ಸುಮಾರು 40 ವರ್ಷದ ಒಂಟಿ ಸಲಗ ಜನರ ಮೇಲೆ ದಾಳಿ ಮಾಡುತ್ತಾ ಜನರಿಗೆ ತೊಂದರೆಯನ್ನುಂಟು ಮಾಡುತ್ತಿತ್ತು.
ಕೆಲವೇ ತಿಂಗಳುಗಳ ಹಿಂದೆ ಭದ್ರಗೊಳ ಗ್ರಾಮದಲ್ಲಿ ಗೌರಿ ಎಂಬ ಮಹಿಳೆಯ ಮೇಲೆ ದಾಳಿ ಮಾಡಿ ಬಲಿಪಡೆದಿತ್ತು. ಎರಡು ದಿನಗಳ ಹಿಂದೆ ಚೆನ್ನಂಗೊಲ್ಲಿ ಗ್ರಾಮದ ಪಾರ್ವತಿ ಎಂಬವರನ್ನೂ ಬಲಿ ಪಡೆದಿತ್ತು.
ಈ ಘಟನೆಯಿಂದ ಸುತ್ತಮುತ್ತಲಿನ ಜನರು ಭಯಭೀತರಾಗಿದ್ದರು. ಕಾಡಾನೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ವನ್ಯ ಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಶಾಸಕ ಎ.ಎಸ್.ಪೊನ್ನಣ್ಣ ಮೂಲಕ ಸಚಿವರಿಗೆ ಒತ್ತಡ ಹೇರಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಾಡಾನೆ ಸೆರೆಗೆ ಅನುಮತಿ ನೀಡಿದ್ದರು.
ದುಬಾರೆ, ಮತ್ತಿಗೋಡು ಮತ್ತು ಹಾರಂಗಿ ಸಾಕಾನೆ ಶಿಬಿರದ 7 ಸಾಕಾನೆಗಳು, 90ಕ್ಕೂ ಅಧಿಕ ಅರಣ್ಯ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಅರವಳಿಕೆ ತಜ್ಞ ಡಾ.ರಮೇಶ್ ಅರವಳಿಕೆ ಇಂಜೆಕ್ಷನ್ ಶೂಟ್ ಮಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4