ತುಮಕೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಸೋಲಿಗೆ ಕಾರಣರಾದವರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಕರೆ ನೀಡಿದರು.
ಜನತಾ ಸಂಗಮ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು. ಲೋಕಸಭೆ ಚುನಾವಣೆಯಲ್ಲಿ ಸೋತ ನಂತರ ದೇವೇಗೌಡರು ಸಾಕಷ್ಟು ನೋವು ಅನುಭವಿಸಿದರು. ಅವರ ಮನಸ್ಸಿನ ಮೇಲೆ ಆಗಿರುವ ಆಘಾತದಿಂದ ಇನ್ನೂ ಹೊರ ಬರಲು ಸಾಧ್ಯವಾಗಿಲ್ಲ. ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಗೌಡರು ನೋವಿನಿಂದ ಹೊರ ಬರುವಂತೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.
ತುಮಕೂರು ಜಿಲ್ಲೆಯ ನೀರಾವರಿ ವಿಚಾರದಲ್ಲಿ ನಮ್ಮ ಕುಟುಂಬ ಎಂದೂ ರಾಜಕಾರಣ ಮಾಡಿಲ್ಲ. ಜಿಲ್ಲೆಗೆ ದ್ರೋಹ ಬಗೆದಿಲ್ಲ. ಆದರೆ ಈ ವಿಚಾರ ಮುಂದಿಟ್ಟುಕೊಂಡು ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಗೌಡರ ಸೋಲಿಗೆ ಕಾರಣರಾದವರು ಯಾವ ರೀತಿ ರಾಜಕಾರಣ ಮಾಡುತ್ತಿದ್ದಾರೆ ಎಂಬುದು ನಿಮಗೆಲ್ಲ ಗೊತ್ತಿದೆ ಎಂದರು.
ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಅಂಜನಪ್ಪ, ಶಾಸಕರಾದ ಎಂ.ವಿ.ವೀರಭದ್ರಯ್ಯ, ಡಿ.ಸಿ.ಗೌರಿಶಂಕರ್, ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಮುಖಂಡರಾದ ಡಿ.ನಾಗರಾಜಯ್ಯ, ಎಂ.ಟಿ.ಕೃಷ್ಣಪ್ಪ, ಸಿ.ಬಿ.ಸುರೇಶ್‌ಬಾಬು, ಕೆ.ಎಂ.ತಿಮ್ಮರಾಯಪ್ಪ, ಸುಧಾಕರಲಾಲ್, ಟಿ.ಆರ್.ನಾಗರಾಜ್, ಗೋವಿಂದರಾಜು, ಬೆಳ್ಳಿ ಲೋಕೇಶ್ ಮೊದಲಾದವರು ಉಪಸ್ಥಿತರಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700.