ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವ ಎಂದು ಪ್ರಮೋದ್ ಮುತಾಲಿಕ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ನನಗೆ ಬೇರೆ ಬೇರೆ ನಂಬರ್‌ಗಳಿಂದ ಕರೆ ಮಾಡಿ, ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇನೆ ಬೋ. ಮಗನೇ ಎಂದು ಹೀನಾಯ ಶಬ್ದಗಳಿಂದ ನಿಂದಿಸಿದ ಸುಮಾರು 4-5 ಸಲ ಬೆದರಿಕೆ ಕರೆಗಳು ಬಂದಿವೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಲಾಗುತ್ತಿದೆ.
ಉರ್ದು ಮಿಶ್ರಿತ ಮಂಗಳೂರು ಕನ್ನಡ ಭಾಷೆಯಲ್ಲಿ ಅತ್ಯಂತ ಕೆಟ್ಟದಾಗಿ ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಈ ಎಲ್ಲಾ ನಂಬರ್ ಗಳನ್ನು ಹುಕ್ಕೇರಿ ಪೊಲೀಸ್ ಠಾಣೆಗೆ ನೀಡಿ ದೂರು ದಾಖಲಿಸಿದ್ದೇನೆ. ಸೂಕ್ತ ರೀತಿಯಲ್ಲಿ ತನಿಖೆ ಮಾಡಿ, ಕ್ರಮ ಕೈಗೊಳ್ಳಬೇಕೆಂದು ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz